ಆಧ್ಯಾತ್ಮಿಕ ಚಿಂತನೆಗಳಿಂದ ಮಾನಸಿಕ ನೆಮ್ಮದಿ-ಕೆ ರಘುರಾಮ್ ವಾಜಪೇಯಿ

ಮೈಸೂರು: ಆಧ್ಯಾತ್ಮಿಕ ಚಿಂತನೆಗಳಿಂದ ಮಾನಸಿಕ ನೆಮ್ಮದಿ ಸಿಗಲಿದೆ ಎಂದು ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ತಿಳಿಸಿದರು.

ಸಂಸಾರಿಕ ಜಂಜಾಟದಲ್ಲಿ ಮುಳುಗಿರುವ ಮನುಷ್ಯ ಒಂದಿಷ್ಟು ಸಮಯವನ್ನು ಧಾರ್ಮಿಕ ಕಾರ್ಯಕ್ರಮಗಳಿಗೆ ಮೀಸಲಿಡಬೇಕು ಆಧ್ಯಾತ್ಮಿಕ ಚಿಂತನೆಗಳಿಂದ ಮಾನಸಿಕ ನೆಮ್ಮದಿ ಸಿಗಲಿದೆ ಎಂದು ಹೇಳಿದರು

ನಗರದ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಕಾರ್ತಿಕ ಮಾಸದ ಅಂಗವಾಗಿ ಹಣ್ಣುಗಳು ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು‌.

ವಿಜ್ಞಾನ ತಂತ್ರಜ್ಞಾನಗಳ ಬೆಳವಣಿಗೆಯಿಂದ ಟಿವಿ, ಮೊಬೈಲ್ ಗಳಿಗೆ ಮಾರು ಹೋಗಿರುವ ಜನ ಸಾಂಪ್ರದಾಯಿಕ ಆಚಾರ ವಿಚಾರಗಳನ್ನು ಮರೆತಿದ್ದಾರೆ ಎಂದು ವಿಷಾದಿಸಿದರು.

ಇತ್ತೀಚಿನ ದಿನಗಳಲ್ಲಿ ಗುರು ಹಿರಿಯರ ಬಗೆಗಿನ ಗೌರವ ಕಡಿಮೆಯಾಗಿ ಪರಸ್ಪರ ಸಂಬಂಧಗಳು ಹಳಸಿ ಹೋಗುತ್ತಿದ್ದು ಜನರಲ್ಲಿ ಸ್ವಾರ್ಥ ಭಾವನೆ ಬೆಳೆಯುತ್ತಿದೆ. ದುಡ್ಡಿನ ಬೆನ್ನಟ್ಟಿದ ಮನುಷ್ಯ ಕೋಟಿಗಟ್ಟಲೆ ಹಣವಿದ್ದರೂ ನೆಮ್ಮದಿಯಿಲ್ಲದೆ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾನೆ. ಇದರಿಂದ ಹೊರಬರಲು ಪ್ರತಿನಿತ್ಯ ದೇವರ ಆರಾಧನೆ, ಪೂಜಾ ಕೈಂಕರ್ಯದ ಜತೆಗೆ ದೇವರ ನಾಮ ಸ್ಮರಣೆ ಮಾಡುವ ಅತ್ಯಗತ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಕೃತ ಪಾಠ ಶಾಲೆಯ ಪ್ರಶಂಪಲರಾದ ಅಜಿತ್,
ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕ ರಂಗನಾಥ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ, ಪ್ರಶಾಂತ್, ಭವ್ಯ, ಸುಬ್ರಮಣಿ,ಎಂ ಮಾಧವಿ, ಚಂದನ, ಹರ್ಷಿತ, ಛಾಯಾ, ಯಶವಂತ್ ಕುಮಾರ್, ವೀರಭದ್ರ ಸ್ವಾಮಿ, ರಾಜೇಶ್ ಕುಮಾರ್,ಮಹೇಶ್,ಎಸ್‌.ಪಿ. ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.