ಮೈಸೂರು: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿ ಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ ಎಂದು ಶಾಸಕ ಹರೀಶ್ ಗೌಡ ಹೇಳಿದರು.
ಮೈಸೂರು ಯುವ ಬಳಗದ ವತಿಯಿಂದ
ಸುಬ್ಬರಾಯನ ಕೆರೆಯ 23ನೇ ವಾರ್ಡಿನ 2024-2025 ನೇ ಸಾಲಿನ ಎಸ್ ಎಸ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.
ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು,ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಹೇಳಿದರು.
ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಛಲ, ಆಸಕ್ತಿಯೊಂದಿಗೆ ನಿಖರ ಗುರಿಗೆ ಮನಸ್ಸನ್ನು ಕೇಂದ್ರೀಕರಿಸಿಕೊಂಡು ಪರಿಶ್ರಮ ಹಾಕಬೇಕು. ಹಾಗದರೆ ತಕ್ಕೆ ಫಲ ದೊರೆಯುತ್ತದೆ ಎಂದು ಹರೀಶ್ ಗೌಡ ತಿಳಿಹೇಳಿದರು.
ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯ ಗೋಪಿ, ಮೈಸೂರು ಟಾರ್ಪಾಲಿಯನ್ಸ್ ಮಾಲೀಕ ವೀರಭದ್ರಪ್ಪ, ದೇವರಾಜ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಜೈ ಕೀರ್ತಿ,ಸಮಾಜ ಸೇವಕರಾದ ಸ್ವಾತಿ,ಸ್ಥಳೀಯ ಮುಖಂಡರುಗಳಾದ ಮಹಾದೇವ್, ಮಂಜುಳಾ, ಶಾಂತ, ಮಂಗಳ, ನವೀನ್, ಮಂಜುನಾಥ್,ಸಂದೀಪ್, ರವಿಚಂದ್ರ, ಲೋಕೇಶ್,ಹರ್ಷ, ಮನು ನಾಯಕ್, ಮತ್ತಿತರರು ಹಾಜರಿದ್ದರು.