ಮೈಸೂರು: ಮಕ್ಕಳಲ್ಲಿ ಯಾವ ಪ್ರತಿಭೆ ಇದೆ ಎಂಬುದನ್ನು ಗುರುತಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳಿಗೆ ಸಹಕಾರಿಯಾಗಲಿದೆ ಎಂದು ಕಡಕೋಳ ಪಟ್ಟಣ ಪಂಚಾಯತಿ ಅಧಿಕಾರಿ ದೀಪ ಅಭಿಪ್ರಾಯ ಪಟ್ಟಿದ್ದಾರೆ.
ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಡಕೋಳ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 22 ಶಾಲೆಗಳನ್ನು ಒಳಗೊಂಡ ಕಡಕೋಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಅವರದೇ ಆದ ಪ್ರತಿಭೆಗಳು ಅಡಗಿರುತ್ತದೆ ಅಂತಹ ಪ್ರತಿಭೆಗಳನ್ನು ಗುರುತಿಸಲು ಸರ್ಕಾರ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ ಈ ನಿಟ್ಟಿನಲ್ಲಿ ಶಿಕ್ಷಕರು ಬಹಳ ಶ್ರಮವಹಿಸಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಲು ಶ್ರಮ ವಹಿಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೆ ವೇಳೆ ಮಕ್ಕಳು ವಿವಿಧ ವೇಷಭೂಷಣಗಳನ್ನು ತೊಟ್ಟು ಸಾರ್ವಜನಿಕರ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಗೀತಾ,ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪಟೇಲ್ ಜವರೇಗೌಡ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಮೇಶ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಮಾದೇಶ, ಕ್ಷೇತ್ರ ಶಿಕ್ಷಣಾಧಿಕಾರಿ ವಿವೇಕಾನಂದ, ಶಾಲೆಯ ಮುಖ್ಯ ಶಿಕ್ಷಕ ದುಂಡಯ್ಯ, ದಲಿತ ಮುಖಂಡ ರಮೇಶ್, ಕಡಕೋಳ ಕುಮಾರಸ್ವಾಮಿ, ಶಿಕ್ಷಕರ ಸಂಘದ ಕೆಂಚೇಗೌಡ ಮತ್ತಿತರರು ಪಾಲ್ಗೊಂಡಿದ್ದರು.