ಪ್ರತೀಕ್ಷ ಪಾವಸ್ಕರ್ ಗೆ ಶ್ರೀ ಸಿದ್ದರಾಮಯ್ಯ ದತ್ತಿ ಚಿನ್ನದ ಪದಕ

Spread the love

ಮೈಸೂರು: ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ಸಿದ್ದರಾಮಯ್ಯ ಹೆಸರಿನಲ್ಲಿ ಚಿನ್ನದ ಪದಕ ಕೊಡಲಾಗುತ್ತಿದ್ದು ಈ ಬಾರಿ ಬೆಂಗಳೂರಿನ ಕುಮಾರಿ ಪ್ರತೀಕ್ಷ ಪಾವಸ್ಕರ್ ಅವರಿಗೆ ನೀಡಿ ಗೌರವಿಸಲಾಗಿದೆ.

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿಜೆ. ವಿಜಯ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಪದಾಧಿಕಾರಿಗಳು 6.8.2022 ರಲ್ಲಿ ಸಭೆ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಅಮೃತ ಮಹೋತ್ಸವದ ಸಂದರ್ಭವಾಗಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಚಿನ್ನದ ದತ್ತಿ ನೀಡುವ ನಿರ್ಣಯ ಅಂಗೀಕರಿಸಲಾಗಿತ್ತು.

ಅದರಂತೆ ಪ್ರತಿ ವರ್ಷ ಘಟಿಕೋತ್ಸವ ಸಂದರ್ಭದಲ್ಲಿ ಬಿಎ,ಎಲ್ ಎಲ್ ಬಿ ಅಂತಿಮ ವರ್ಷದ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ/ ವಿದ್ಯಾರ್ಥಿನಿಗೆ ಶ್ರೀ ಸಿದ್ದರಾಮಯ್ಯ 75 ಅಮೃತ ಮಹೋತ್ಸವ ಚಿನ್ನದ ಪದಕ ನೀಡುತ್ತಾ ಬರಲಾಗುತ್ತಿದೆ.

2022-23 ರಲ್ಲಿ ಶ್ರೀರಂಗಪಟ್ಟಣದ ವಿನಯ್ ಅವರು ಚಿನ್ನದ ಪದಕ ಪಡೆದಿದ್ದರು. 2024 25 ರಲ್ಲಿ ಬೆಂಗಳೂರಿನ ಕುಮಾರಿ ಪ್ರತಿಕ್ಷ ಪಾವಸ್ಕರ್ ಅವರು ಶ್ರೀ ಸಿದ್ದರಾಮಯ್ಯ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ .

ಈ ಕುರಿತು ಜಿಲ್ಲಾ ಕಾಂಗ್ರೆಸ್ ಸಮಿತಿ ಸಿಎಂ ಸಿದ್ದರಾಮಯ್ಯನವರಿಗೆ ತಿಳಿಸಿದಾಗ ಸ್ವತಃ ಮುಖ್ಯಮಂತ್ರಿಗಳು ಕುಮಾರಿ ಪ್ರತಿಕ್ಷಾ ಅರನ್ನ ಮೈಸೂರಿನ ತಮ್ಮ ನಿವಾಸಕ್ಕೆ ಕರೆಸಿಕೊಂಡು ಅಭಿನಂದಿಸಿ ಗೌರವಿಸಿದರು‌

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ನನ್ನ ಹೆಸರಿನಲ್ಲಿ ಚಿನ್ನದ ಪದಕದ ದತ್ತಿ ನೀಡುವುದು ನನಗೆ ಗೊತ್ತಿರಲಿಲ್ಲ, ಆದರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಾನ್ವಿತರನ್ನ ಪ್ರೋತ್ಸಾಹಿಸುವ ಈ ಉದ್ದೇಶ ತುಂಬಾ ಉತ್ತಮ ಬೆಳವಣಿಗೆ ಎಂದು ಹೇಳಿದರು.

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಯ ಕಾರ್ಯವೈಖರಿ ಹಾಗೂ ಕಳೆದ ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಶ್ರಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಪ್ರಾಮಾಣಿಕ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರಿನ ರೈಲ್ವೆ ನಿಲ್ದಾಣದ ಪಕ್ಕದ ಖಾಲಿ ಜಾಗದಲ್ಲಿ ಕಾಂಗ್ರೆಸ್ ಭವನವನ ನಿರ್ಮಾಣಕ್ಕೆ ಮುಂದಿನ ಮಾರ್ಚ್ 15 ರಂದು ಶಂಕು ಸ್ಥಾಪನೆ ನೆರವೇರಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ಬಿಜೆ. ವಿಜಯಕುಮಾರ್ ಹಾಗೂ ಪದಾಧಿಕಾರಿಗಳಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಹರೀಶ್ ಗೌಡ, ರಮೇಶ್ ಬಂಡಿ ಸಿದ್ದೇಗೌಡ, ಎ.ಆರ್. ಕೃಷ್ಣಮೂರ್ತಿ,ಮಾಜಿ ಸಚಿವ ಕೋಟೆ ಶಿವಣ್ಣ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.