ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ರಿಜಿಸ್ಟ್ರಾರ್ (ಆಡಳಿತ) ಆಗಿ ಮೈಸೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಪ್ರೊ. ಎಂ.ಪಿ. ಸದಾಶಿವ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ರಾಜ್ಯಪಾಲರು ಹಾಗೂ ಕೆಎಸ್ಒಯು ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.
ಕೆಎಸ್ಒಯು ಕಾಯ್ದೆ 1992ರ ಸೆಕ್ಷನ್ 11ರನ್ವಯ, ಉಪಕುಲಪತಿ ಮತ್ತು ರಾಜ್ಯ ಸರ್ಕಾರದ ಸಮಾಲೋಚನೆಯೊಂದಿಗೆ ಈ ನೇಮಕಾತಿ ಮಾಡಲಾಗಿದೆ.
ಪ್ರೊ. ಸದಾಶಿವ ಅವರು ಅಧಿಕಾರ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಸ್ನೇಹಿತರು ಮತ್ತು ಹಿತೈಷಿಗಳು ಶುಭ ಕೋರಿದರು.
