ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಘಟಕದ ಮಾಜಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರ ತಂದೆ ಸಿ. ರಘುನಾಥ ರೆಡ್ಡಿ ಅವರು ಇಹಲೋಕ ತ್ಯಜಿಸಿದ್ದಾರೆ.
ಅವರು ಶನಿವಾರ ಮಧ್ಯಾಹ್ನ 1.30 ಕ್ಕೆ ಅಗಲಿದ್ದಾರೆ.ರಘುನಾಥ ರೆಡ್ಡಿ ಅವರು ಹೆಚ್ಎಎಲ್ ಕಾರ್ಖಾನೆಯಲ್ಲಿ ಉನ್ನತ ಶ್ರೇಣಿಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ನಿವೃತ್ತಿಯ ನಂತರ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಆದರ್ಶ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡಿ ಸಮಾಜಕ್ಕೆ ಅಪಾರವಾದ ಸೇವೆ ಸಲ್ಲಿಸಿ ಮಾದರಿಯಾಗಿದ್ದಾರೆ
ಮೃತರ ಅಂತ್ಯಸಂಸ್ಕಾರವನ್ನು ಮೇ.4 ರಂದು ಸೋಮವಾರ ಬೆಂಗಳೂರಿನ ಹೆಬ್ಬಾಳದ ಚಿತಾಗಾರದಲ್ಲಿ ನಡೆಸಲಾಗುತ್ತದೆ.
