ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಫೇಲ್ ಆಗಿದ್ದಕ್ಕೆ ಬೇಸರಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದ್ದು,ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಐಶ್ವರ್ಯ, ಫಲಿತಾಂಶ ಹೊರ ಬೀಳುತ್ತಿದ್ದಂತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಐಶ್ವರ್ಯ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು,ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.