ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ

Spread the love

ಪುಣೆ: ಹೆಲಿಕಾಪ್ಟರ್ ಪತನವಾಗಿ ಮೂವರು ದುರ್ಮರಣ ಅಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಸಮೀಪ ನಡೆದಿದೆ.

ಪುಣೆ ಸಮೀಪದ ಬವ್ಧಾನ್ ನ ಕಣಿವೆ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.

ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಸ್ಪೋಟಗೊಂಡಿದೆ ಹೆಲಿಕಾಪ್ಟರ್ ನಲ್ಲಿದ್ದ ಇಬ್ಬರು ಪೈಲಟ್ ಗಳು ಮತ್ತು ಇಂಜಿನಿಯರ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮುಂಜಾನೆ‌ ಸುಮಾರು 6.30ರ ವೇಳೆ ಹೆಲಿಕಾಪ್ಟರ್ ಪತನಗೊಂಡಿದೆ ದಟ್ಟ ಮಂಜಿನಿಂದಾಗಿ ಈ ಅವಘಡ ಸಂಭವಿಸಿರಬಹುದು ಎಂದು ಪುಣೆಯ ಪಿಂಪ್ರಿ ಚಿಂಚ್ವಾಡ್ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಇನ್ಸ್ಪೆಕ್ಟರ್ ಕನ್ಹಯ್ಯಾ ಥೋರಟ್ ಮಾಹಿತಿಯನ್ನು ನೀಡಿದ್ದು, ಪುಣೆ ಜಿಲ್ಲೆಯ ಬವ್ಧಾನ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಈ ಹೆಲಿಕಾಪ್ಟರ್ ಯಾರಿಗೆ ಸೇರಿದ್ದು ಎಂದು ಇನ್ನೂ ಖಚಿತವಾಗಿಲ್ಲ ಎಂದು ತಿಳಿಸಿದ್ದಾರೆ.