ಪುಣೆಯಲ್ಲಿ ಇಂದ್ರಾಯಣಿ ನದಿ ಸೇತುವೆ ಕುಸಿದು ಹಲವು ಪ್ರವಾಸಿಗರು ನೀರು ಪಾಲು

Spread the love

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಇಂದ್ರಾಯಣಿ ನದಿ ಸೇತುವೆ ಕುಸಿದು ಹಲವಾರು ಪ್ರವಾಸಿಗರು ನೀರು ಪಾಲಾಗಿದ್ದಾರೆ‌

ಪಿಂಪ್ರಿ-ಚಿಂಚ್‌ವಾಡ್ ಜಿಲ್ಲೆಯ ಮಾವಲ್ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕುಂದಮಾಲಾ ಗ್ರಾಮದ ಬಳಿ ಸೇತುವೆ ಕುಸಿದಿದೆ.

ರುದ್ರ,ರಮಣೀಯ ಜಲಪಾತ ಮತ್ತು ನದಿ ದಡ ನೋಡಲು ಪ್ರತಿವರ್ಷ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ.ಹಾಗೆಯೇ ಭಾನುವಾರ ರಜಾ ದಿನವಾದುದರಿಂದ ಹೆಚ್ಚು ಪ್ರವಾಸಿಗರು ಬಂದಿದ್ದರು.ಪ್ರವಾಸಿಗರು ನದಿಯಲ್ಲಿ ವಿಹರಿಸುತ್ತಿದ್ದಾಗಲೇ ಸೇತುವೆ ಕುಸಿದಿದೆ.ಹಾಗಾಗಿ ಹಲವಾರು ಮಂದಿ ಕೊಚ್ಚಿ ಹೋಗಿದ್ದಾರೆ.

6 ಜನರನ್ನು ರಕ್ಷಿಸಲಾಗಿದೆ. ಇನ್ನೂ ಹಲವಾರು ಮಂದಿ ಅವಶೇಷಗಳಡಿ ಸಿಲುಕಿದ್ದು ನೀರಿನ ಹರಿವು ಹೆಚ್ಚಾಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ ಎಂದು ಪಿಂಪ್ರಿ-ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯ ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿವೆ, ರಕ್ಷಣಾ ಕಾರ್ಯಕ್ಕೆ ದೋಣಿಗಳು, ಡೈವರ್‌ಗಳು ಮತ್ತು ಡ್ರೋನ್‌ಗಳನ್ನು ನಿಯೋಜಿಸಲಾಗಿದೆ. ಇಲ್ಲಿಯವರೆಗೆ, ಕೆಲವು ಜನರನ್ನು ರಕ್ಷಿಸಲಾಗಿದೆ,ಆದರೆ ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಈ ನಡುವೆ ಕಾಳಿ ನದಿ ಸೇತುವೆ ಪಿಲ್ಲರ್ ದಿಢೀರ್​ ಕುಸಿದಿದೆ,ಆದರೆ ಭಾರೀ ಅನಾಹುತ ತಪ್ಪದೆ.

ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಇಂದ್ರಾಯಣಿ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.