ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರ 16ನೇ ದಿನದ ಪುಣ್ಯರಾಧನೆ:ಹೆಚ್ ಡಿ ಡಿ ಭಾಗಿ

Spread the love

ಬೆಂಗಳೂರು: ಪರಮ ಪೂಜ್ಯ ಜಗದ್ಗುರು ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ರವರ 16ನೇ ದಿನದ ಪುಣ್ಯರಾಧನೆ ಕಾರ್ಯಕ್ರಮ ಬೆಂಗಳೂರಿನ ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ ಜಿ ಗಂಗಾಧರ್, ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಮತ್ತಿತರರು ಹಾಜರಿದ್ದರು.