ಬೆಂಗಳೂರು: ಮೂರ್ನಾಲ್ಕು ವೋಟಿಗೋಸ್ಕರ ದೇಶದ್ರೋಹಿಗಳನ್ನು ಬ್ರದರ್ಸ್ ಎಂದು ಸಮರ್ಥನೆ ಮಾಡಿಕೊಳ್ಳುವ ಸ್ವಾರ್ಥಿಗಳು ನಾಡಿನ ಸಿಎಂ ಆಗಲು ಹೊರಟಿರುವುದು ಕರ್ನಾಟಕದ ದುರಂತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಅಂದು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟವನ್ನು ಕೇವಲ ಡೈವರ್ಶನ್ ಪಾಲಿಟಿಕ್ಸ್ ಎಂದು ಲೇವಡಿ ಮಾಡಿ ಉಗ್ರರ ಪರ ನಿಂತಿದ್ದ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರಿಗೆ ಈಗ ಸತ್ಯದ ದರ್ಶನವಾಗಿದೆ ಎಂದು ಟ್ವೀಟ್ ಮಾಡಿ ಅಶೋಕ ಕಾಲೆಳೆದಿದ್ದಾರೆ.
ಅದೇ ಪ್ರಕರಣದ ಉಗ್ರ ಶಾರೀಕ್ನ ಕೃತ್ಯ ಸಾಬೀತಾಗಿದೆ,ಎನ್ಐಎ ನ್ಯಾಯಾಲಯ ಆತನಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರದಲ್ಲೂ ಕೇವಲ ತುಷ್ಟೀಕರಣ ಮತ್ತು ಓಲೈಕೆ ರಾಜಕಾರಣ ಮಾಡುವ ಕರ್ನಾಟಕ ಕಾಂಗ್ರೆಸ್ ನ ನೈಜ ಮುಖವಾಡ ಕಳಚಿದೆ ಎಂದು ಟೀಕಿಸಿದ್ದಾರೆ.
ದೇಶದ ಭದ್ರತೆಗಿಂತ ಕಾಂಗ್ರೆಸ್ಗೆ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಗಿದೆ. ಕಾಂಗ್ರೆಸ್ ಇನ್ನಾದರೂ ಮತಾಂಧರನ್ನು ತಮ್ಮ ಬ್ರದರ್ಸ್ ಎಂದು ಸಮರ್ಥನೆ ಮಾಡಿಕೊಳ್ಳುವುದನ್ನು ಬಿಡಬೇಕು ಎಂದು ಅಶೋಕ್ ಸಲಹೆ ನೀಡಿದ್ದಾರೆ.
