ಮಳೆ ಅನಾಹುತ ಪರಿಹಾರಕ್ಕೆ ಸಿದ್ಧತೆ : ಸಿಎಂ

Spread the love

ಮೈಸೂರು: ಪ್ರಕೃತಿ ವಿಕೋಪದಿಂದ ಉಂಟಾದ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ,ಅದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,
ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ,ಸ್ಥಳ ಸಮೀಕ್ಷೆ ನಡೆಯುತ್ತಿದ್ದು ಶೀಘ್ರ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದರು.

ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಕಾಂಗ್ರೆಸ್ಸಿಗೆ ಸೇರಲಿದ್ದಾರಾ ಎಂಬ ವರದಿಗಾರರ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಸ್ವಾಗತ ಎಂದು ಆಹ್ವಾನ ನೀಡಿದರು.

ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿಗೆ ಟಿಕೆಟ್ ನೀಡಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದರು.

ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಚರ್ಚೆ ಆಗಿದೆ, ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿಯೇ, ಒಂದೆರಡು ದಿನದಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರಗಳಿಗೆ ಯಾರಿಗೆ ಟಿಕೆಟ್ ಎಂಬುದು ಗೊತ್ತಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.