ಮೈಸೂರು: ವೀರ ಸಾವರ್ಕರ್ ಯುವ ಬಳಗದ ವತಿಯಿಂದ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ವೇಳೆ ಮೈಸೂರಿನ ರಾಜಮಾತೆ ಕೆಂಪನಂಜಮ್ಮಣ್ಣಿ
ಅವರನ್ನು ಸ್ಮರಿಸಲಾಯಿತು.
ಭಾರತ ಮಾತೆ ಹಾಗೂ
ಕೆಂಪನಂಜಮ್ಮಣ್ಣಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಬಿಜೆಪಿ ಸಹ ಪ್ರಭಾರಿಗಳಾದ ಇ ಸಿ ನಿಂಗರಾಜೇಗೌಡ ಅವರು, ಮೈಸೂರು ನಗರಕ್ಕೆ ರಾಜಮಾತೆ ಕೊಡುಗೆ ಅಪಾರ ಎಂದು ಬಣ್ಣಿಸಿದರು.
ಕೆ.ಆರ್.ಎಸ್. ಅಣೆಕಟ್ಟು ಕಟ್ಟುವ ವೇಳೆ ಹಣಕಾಸಿನ ಕೊರತೆಯಾದಾಗ ತಮ್ಮ ಮೈ ಮೇಲಿದ್ದ ಒಡವೆ ಮಾರಿ ಅಣೆಕಟ್ಟು ಪೂರ್ಣಗೊಳ್ಳಲು ಸಹಾಯ ಮಾಡಿದ ನಮ್ಮ ಹೆಮ್ಮೆಯ ಮಹಾರಾಣಿ ಕೆಂಪ ನಂಜಮ್ಮಣ್ಣಿ ಯವರ ಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು.
ಮೈಸೂರು ನಗರದ ವಿಸ್ತರಣೆ ಹಾಗೂ ಪೈಪ್ ಗಳ ಮೂಲಕ ನೀರು ಸರಬರಾಜು ಮತ್ತು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಂಕುಸ್ಥಾಪನೆ ಇವರ ಕಾರ್ಯಾಕೆ ಸಾಕ್ಷಿಯಾಗಿದೆ.
ಅವರು ಕಟ್ಟಾ ಹಿಂದೂ ಧರ್ಮದ ಅನುಯಾಯಿ ಯಾಗಿದ್ದರು, ಇಂತಹ ಮಹಾನ್ ಸಾಧಕೀಯರು ಇಂದಿನ ಮಹಿಳೆಯರಿಗೆ ಸ್ಪೂರ್ತಿದಾಯಕರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಪರಮೇಶ್ ಗೌಡ, ಮುಖಂಡರಾದ ಬಾಲಣ್ಣ,
ಸಂದೇಶ್, ಉಮೇಶ್, ಪ್ರಮೋದ್ ಗೌಡ, ಭೈರಪ್ಪ, ಗಂಗಣ್ಣ, ಗೋಪಾಲ್, ಅಶ್ವಥ್, ಜಯಪ್ಪ, ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರಾದ ವಸಂತ ಮನೀಶ್, ಚಂದ್ರಕಲಾ, ರಶ್ಮಿ, ಮಧು, ಗೀತಾ, ಒಕ್ಕಲಿಗರ ಸಂಘದ ನಿರ್ದೇಶಕರಾದ ಚೇತನ್ ಗೌಡ ,
ಪ್ರವೀಣ್, ರಾಜಣ್ಣ, ವಿಜಯ್, ಅಭಿ, ವಿನೋದ, ವಿ ಎಸ್ ಕಿರಣ್, ಬ್ರಹ್ಮಚಾರ್, ಯೋಗೇಶ್, ನಾಗೇಶ್, ಅನೋಜ್, ರಾಜೇಶ್, ಮೋಹಿತ್ ಗೌಡ, ಚೇತನ್ ಗೌಡ ಟಿ.ಎಸ್ ಅರುಣ್, ವಿನೋದ್ ಅರಸ್, ಮತ್ತಿತರರು ಹಾಜರಿದ್ದರು.
