ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿ ಸಭೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆಯಿತು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಸಲಹಾ ಸಮಿತಿ ಸದಸ್ಯರಾದ ನಟಿ ಜಯಮಾಲಾ, ಎಸ್.ನಾರಾಯಣ್, ಸಾಧುಕೋಕಿಲಾ, ಪುರುಷೋತ್ತಮ್ ಬಿಳಿಮಲೆ, ನಾಗರಾಜ್ ಮೂರ್ತಿ, ಡಾ.ರುದ್ರಪ್ರಸಾದ್, ಮುಕುಂದ್ ರಾಜ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜು ಶ್ರೀ, ಇಲಾಖೆ ನಿರ್ದೇಶಕರಾದ ವಸುಂಧರಾ ಉಪಸ್ಥಿತರಿದ್ದರು.
ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
