ಹುಣಸೂರು,ನವೆಂಬರ್.೧: ಹುಣಸೂರಿನ ಮಂಟಿ ವೃತ್ತದಲ್ಲಿ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ, ವಿಷ್ಣುವರ್ಧನ್ ಅಭಿಮಾನಿಗಳ ಸಂಘ ಹಾಗೂ ಆಟೋ ಚಾಲಕರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.
ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕರಿಗೆ ಹಣ್ಣು ಹಂಪಲು ವಿತರಿಸಲಾಯಿತು, ಮಧ್ಯಾಹ್ನ ಅನ್ನದಾನ ಹಮ್ಮಿಕೊಳ್ಳಲಾಗಿತ್ತು.
ನಂತರ ಸಂಗೀತ ರಸಸಂಜೆ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ವೇಳೆ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಅವರನ್ನು ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಮೂರೂ ಸಂಘಗಳ ಅಧ್ಯಕ್ಷರು,ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಹಾಜರಿದ್ದರು.

