ಒಕ್ಕಲಿಗರ ಕ್ಷೇಮಾಬಿವೃದ್ದಿ ಸಂಘದಿಂದ ರಾಜ್ಯೋತ್ಸವ ಆಚರಣೆ

ಮೈಸೂರು:ಮೈಸೂರಿನ ಹೂಟಗಳ್ಳಿ ಒಕ್ಕಲಿಗರ ಕ್ಷೇಮಾಬಿವೃದ್ದಿ ಸಂಘದ ವತಿಯಿಂದ ಕೆ.ಹೆಚ್.ಬಿ. ಬಡಾವಣೆ ಒವೆಲ್ ಉದ್ಯಾನವನದಲ್ಲಿ 70 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷ ರಾದ ಎನ್.ಟಿ. ದಾಸೇಗೌಡ ಅವರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡರು ಭಾಗವಹಿಸಿ ಧ್ವಜಾರೋಹಣ ಮಾಡಿದರು.

ಮತ್ತೊಬ್ಬ ಮುಖ್ಯ ಅತಿಥಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಿಕಾ ಸುರೇಶ್, ಜೆ.ಡಿ.ಎಸ್ ಮುಖಂಡರಾದ ಸುರೇಶ, ತಾಲೂಕು ಪಂಚಾಯಿತಿ ಸದಸ್ಯರಾದ ವಿಜಯಕುಮಾರ, ಪಂಚಾಯ್ತಿ ಸದಸ್ಯರಾದ ಸಿದ್ದರಾಜು (ಡೈರಿ )ಹಾಗೂ ಸಂಘದ ಎಲ್ಲಾ ಮಾಜಿ ಅಧ್ಯಕ್ಷರು, ಮಾಜಿ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು, ಸಂಘದ ಹಾಲಿ ಪದಾಧಿಕಾರಿಗಳು ಕೆ. ಹೆಚ್.ಬಿ.ಬಡಾವಣೆಯ ನಿವಾಸಿಗಳು ಹಾಗೂ ಕನ್ನಡ ಅಭಿಮಾನಿಗಳು ಭಾಗವಹಿಸಿದರು.

ಕಾರ್ಯಕ್ರಮದ ವೇಳೆ ಎಲ್ಲರಿಗೂ ಸಿಹಿ ವಿತರಣೆ ಮಾಡಲಾಯಿತು.