ದೆಹಲಿ ನೂತನ ಸಿಎಂ ರೇಖಾ ಗುಪ್ತ ಪ್ರಮಾಣ ವಚನ ಸ್ವೀಕಾರ

Spread the love

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ‌ ಪ್ರಮಾಣ ವಚನ ಸ್ವೀಕರಿಸಿದರು.

ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ದಾಸ್ ಅವರು ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಗುರುವಾರ ನಡೆದ ಬೃಹತ್‌ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ವಿ.ಕೆ ಸಕ್ಸೆನಾ ಪ್ರಮಾಣ ವಚನ ಬೋಧಿಸಿದರು.

ಇದೇ ವೇಳೆ ಸಚಿವರಾಗಿ ಪರ್ವೇಶ್ ಸಾಹಿಬ್ ಸಿಂಗ್, ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದರ್ ಇಂದ್ರಜ್ ಸಿಂಗ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಕುಮಾರ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದರು.

ರೇಖಾ ಗುಪ್ತ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಮೂಲಕ ದೆಹಲಿಯ 4ನೇ ಮಹಿಳಾ ಮುಖ್ಯಮಂತ್ರಿ ಎಂಬುದು ವಿಶೇಷ.

ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜನಾಥ್‌ ಸಿಂಗ್‌, ಹಲವು ಕೇಂದ್ರ ಸಚಿವರು, ಚಂದ್ರಬಾಬು ನಾಯ್ಡು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.