ಮೈಸೂರು: ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮನವಮಿ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ಶ್ರೀರಾಮ ತಾರಕ ಹೋಮ ನೆರವೇರಿಸಲಾಯಿತು.
ಇದೇ ವೇಳೆ ಪಂಚಮುಖಿ ಆಂಜನೇಯ ಸ್ವಾಮಿ ಹಾಗೂ ಶ್ರೀರಾಮನಿಗೆ ವಿಶೇಷ ಅಭಿಷೇಕವನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು.
ನಂತರ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ ,ಕೋಸಂಬರಿ ವಿತರಿಸಲಾಯಿತು.
