ಸಚಿವ ರಾಮಲಿಂಗಾರೆಡ್ಡಿ ಸಭೆ:ಲಾರಿ ಮುಷ್ಕರ ಅಂತ್ಯ

Spread the love

ಬೆಂಗಳೂರು: ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರ ಅಂತ್ಯವಾಗಿದೆ.

ಇಂದು ಸರ್ಕಾರದ ಪರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಲಾರಿ ಮಾಲಿಕರು ಮತ್ತು ಚಾಲಕರೊಂದಿಗೆ ನಡೆಸಿದ‌ ಸಭೆ ಸಖಾಂತ್ಯವಾಗಿದೆ.

ಸಭೆಯಲ್ಲಿ ನಮ್ಮ ಬೇಡಿಕೆ ಈಡೇರಿಕೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಹಾಗಾಗಿ ಮುಷ್ಕರ ಕೈ ಬಿಟ್ಟಿರುವುದಾಗಿ ಲಾರಿ ಮಾಲಿಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

ಈ ಕುರಿತು ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿ,ಸಂಘದವರು ಆರು ಬೇಡಿಕೆಗಳನ್ನು ಇಟ್ಟಿದ್ದಾರೆ. ಮೊದಲು ಆಯುಕ್ತರ ಜೊತೆ ಸಭೆ ನಡೆಸಿದ್ದರು. ಆನ್‌ಲೈನ್‌ನಲ್ಲಿ ದಂಡ ಕಟ್ಟುವ ವ್ಯವಸ್ಥೆಯನ್ನು ಮಾಡಲಿದ್ದೇವೆ ಎಂದು ಹೇಳಿದರು.

ಈ ವೇಳೆ ಷಣ್ಮುಗಪ್ಪ ಪ್ರತಿಕ್ರಿಯಿಸಿ, ನಾಲ್ಕು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದೆವು. ಬಾರ್ಡರ್ ಚೆಕ್‌ಪೋಸ್ಟ್ ಸಮಸ್ಯೆಯನ್ನು 3 ತಿಂಗಳಲ್ಲಿ ಬಗೆಹರಿಸುವ ಭರವಸೆ ನೀಡಿದ್ದಾರೆ. ಡಿಸೇಲ್ ದರ 2023ರಲ್ಲಿ ಯದ್ವಾತದ್ವಾ ಏರಿಕೆ ಮಾಡಿದ್ದರು. ಇದನ್ನು ಇನ್ನೊಂದು ಬಾರಿ ಅಧ್ಯಯನ ಮಾಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

5 ಗಂಟೆ ಮೇಲೆ ಬರಲು ಆಗದೇ ಇರುವುದರ ಬಗ್ಗೆಯೂ ಗಮನ ಹರಿಸುವುದಾಗಿ ಹೇಳಿದ್ದಾರೆ. ಪೊಲೀಸರ ಕಿರುಕುಳದ ಬಗ್ಗೆಯೂ ತಿಳಿಸಿದ್ದೇವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.ಅದಕ್ಕಾಗಿ ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಷಣ್ಮುಗಪ್ಪ ತಿಳಿಸಿದರು.