ಮೈಸೂರು: ಶ್ರೀ ಶಂಕರಾಚಾರ್ಯರ ಜಯಂತಿಯ ಜೊತೆಯಲ್ಲೆ ಶ್ರೀ ರಾಮಾನುಜಾಚಾರ್ಯರ ಜಯಂತಿ ಆಚರಣೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಶಾಸಕ ಟಿ ಎಸ್ ಶ್ರೀವತ್ಸ ಅವರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಶಿವರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು.
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಿರುವುದು ಶಂಕರ ಜಯಂತಿ ಜಾರಿಗೆ ತಂದಿರುವುದು ಸ್ವಾಗತಾರ್ಹ, ಹಾಗೆಯೇ ರಾಮಾನುಜರ ಸೇವೆ ಕೊಡುಗೆ ಮತ್ತು ಆದರ್ಶಗಳನ್ನು ಪರಿಗಣಿಸಿ ರಾಜ್ಯ ಸರ್ಕಾರ ನಿರ್ಲಕ್ಷ್ಯವನ್ನು ತೋರದೆ ಶಂಕರ ಜಯಂತಿಯ ಜೊತೆಯಲ್ಲೆ ರಾಮಾನುಜರ ಜಯಂತಿಯನ್ನು ಸಹ ಆಚರಣೆ ಜಾರಿಗೆ ತರಲು ಎಂದು ಮನವಿ ಸಲ್ಲಿಸಿ ಕೋರಲಾಯಿತು.
ಈ ಸಂದರ್ಭದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್,ವಿಪ್ರ ಮುಖಂಡರಾದ ನಂ ಶ್ರೀಕಂಠ ಕುಮಾರ್,ರಘುರಾಮ್ ವಾಜಪಾಯಿ,ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್,ಅಜಯ್ ಶಾಸ್ತ್ರಿ,ಎಂ ಆರ್ ಬಾಲಕೃಷ್ಣ,ಹರೀಶ್,ಚಕ್ರಪಾಣಿ,
ಸುಚಿಂದ್ರ,ಮಿರ್ಲೆ ಪಣೀಶ್ ಸೇರಿದಂತೆ ಅನೇಕ ವಿಪ್ರ ಮುಖಂಡರು ಹಾಜರಿದ್ದರು.
