ಹುಣಸೂರು: ಹುಣಸೂರು ತಾಲೂಕು ಕಚೇರಿಯಲ್ಲಿ ಅಕ್ಟೋಬರ್ 23 ಗುರುವಾರದಂದು ಕಿತ್ತೂರು ರಾಣಿ ಚೆನ್ನಮ್ಮ ಅವರ ಜನ್ಮದಿನವನ್ನು ವಿಶೇಷವಾಗಿ ಆಚರಿಸಲಾಯಿತು
ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಮಹಾನ್ ರಾಷ್ಟ್ರಪ್ರೇಮಿ ಕಿತ್ತೂರು ರಾಣಿ ಚೆನ್ನಮ್ಮ ಬೆಳಗಾವಿಯ ಕಿತ್ತೂರಿನಲ್ಲಿ ಅಕ್ಟೋಬರ್ 23,1778 ರಂದು ಜನಿಸಿದರೆಂದು ಇತಿಹಾಸ ಹೇಳುತ್ತದೆ.
ಸರ್ಕಾರದ ಆದೇಶದಂತೆ ಅಕ್ಟೋಬರ್ 23ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಿತ್ತೂರು ಚೆನ್ನಮ್ಮ ಅವರ ಜನ್ಮದಿನವನ್ನು ವಿಶೇಷವಾಗಿ ಆಚರಿಸಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ.
ಅದರಂತೆ ಇಂದು ಹುಣಸೂರು ತಾಲೂಕು ಕಚೇರಿಯಲ್ಲಿ ತಾಸಿಲ್ದಾರ್ ಅವರ ಸಮ್ಮುಖದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡು ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರ ಇಟ್ಟು ಪೂಜೆ ಮಾಡಿ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಸೇರಿದಂತೆ ತಾಲೂಕಿನ ವಿವಿಧ ಪಕ್ಷಗಳ ಮುಖಂಡರು ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.
ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ರಾಷ್ಟ್ರ ಪ್ರೇಮಿ ರಾಣಿ ಚೆನ್ನಮ್ಮನವರ ತ್ಯಾಗ,ಬಲಿದಾನವನ್ನು ಸ್ಮರಿಸಲಾಯಿತು.