ಅತ್ಯಾಚಾರ ಆರೋಪದ ಮೇಲೆ ನಟ‌ ಮಡೆನೂರು ಮನು ಅರೆಸ್ಟ್

ಬೆಂಗಳೂರು: ಸಹ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕುಲದಲ್ಲಿ ಕೀಳ್ಯಾವುದೋ ಚಿತ್ರದ ನಾಯಕ ನಟ ಮಡೆನೂರು ಮನು ಅವರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ

ಸಹ ನಟಿ ನೀಡಿದ ದೂರಿನ ಮೇರೆಗೆ ಮಡೆನೂರು ಮನು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಕರಣ ದಾಖಲಾದ ಬಳಿಕ ಮಡೆನೂರು ಮನು ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದರು. ಹಾಸನದಲ್ಲಿದ್ದ ಅವರನ್ನು ವಶಕ್ಕೆ ಪಡೆದು‌ ಬೆಂಗಳೂರಿಗೆ ಕರೆತರಲಾಗಿದೆ.

ಕುಲದಲ್ಲಿ ಕೀಳ್ಯಾವುದೋ ಚಿತ್ರವು ಶುಕ್ರವಾರ ಬಿಡುಗಡೆ ಆಗುತ್ತಿದೆ. ಕಿರುತೆರೆಯಲ್ಲಿ ಪ್ರಸಾರ ಆಗುತ್ತಿದ್ದ ಕಾಮಿಡಿ ಕಿಲಾಡಿ ಕಾರ್ಯಕ್ರಮದಲ್ಲಿ ಮಡೆನೂರು ಮನು ಪ್ರಸಿದ್ದಿಯಾಗಿದ್ದರು.