ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಲುಕಿಸಬೇಕೆಂಬ ಉದ್ದೇಶದಿಂದಲೇ ಬಿಜೆಪಿ ಕೃಪಾಪೋಷಿತ ಕಂಪನಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದೆ ಎಂದು ಇಂದಿರಾಗಾಂಧಿ ಬ್ಲಾಕ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು ಗಂಭೀರ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ, ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹತಾಶೆಗೊಂಡ ಬಿಜೆಪಿ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಕಪ್ಪು ಚುಕ್ಕೆ ಅಂಟಿಸಲು ಹೊರಟಿದೆ ಎಂದು ಪ್ರಕಟಣೆಯಲ್ಲಿ ಅವರು ದೂರಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ, ಕಾನೂನು ಹೋರಾಟದ ಮೂಲಕ ತಕ್ಕ ಉತ್ತರ ನೀಡಲಾಗುವುದು ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಅದಕ್ಕೆ ರಾಜಭವನವನ್ನು ಬಳಸಿಕೊಂಡು ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ರಾಜಕೀಯಕ್ಕಾಗಿ ಪ್ರಕರಣದಲ್ಲಿ ಸಿಲುಕಿಸಲು ಹೊರಟಿದ್ದಾರೆ ರಾಜ್ಯದ ಜನರು ಬಿಜೆಪಿ ಹಾಗೂ ಜೆಡಿಎಸ್‌ಗೆ ಬರುವ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ರವಿ ಎಚ್ಚರಿಸಿದ್ದಾರೆ.