ರಾಯಣ್ಣ ಯುವಜನರಿಗೆ ಸ್ಪೂರ್ತಿ- ಎಸ್ ಪ್ರಕಾಶ್ ಪ್ರಿಯಾದರ್ಶನ್

Spread the love

ಮೈಸೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರು ದೇಶಪ್ರೇಮಿಯಾಗಿದ್ದು ಅವರ ಆದರ್ಶ ಎಲ್ಲರಿಗೂ ಸ್ಪೂರ್ತಿಯಾಗಲಿ ಎಂದು ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ತಿಳಿಸಿದರು

ನಗರದ ವಿದ್ಯಾರಣ್ಯಪುರಂನಲ್ಲಿರುವ ಸಾರ್ವಜನಿಕ ಸುಬ್ಬಣ್ಣ ಹಾಸ್ಟೆಲ್‍ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್,ಹಣ್ಣು ಹಂಪಲು ವಿತರಿಸುವ ಮೂಲಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ವೇಳೆ ಅವರು ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾಗಿದ್ದ ಸಂಗೊಳ್ಳಿ ರಾಯಣ್ಣ ಅವರ ನಿಸ್ವಾರ್ಥ ಹೋರಾಟ ದೇಶಪ್ರೇಮ ಯುವಜನತೆಯಲ್ಲಿ ಸ್ಪೂರ್ತಿಯಾಗಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಶಾಲಾ ಮುಖ್ಯ ಶಿಕ್ಷಕರಾದ ನಟರಾಜ್,ಸುಬ್ರಮಣ್ಯ,ಗಾಯಕ ಯಶವಂತ್ ಕುಮಾರ್, ಬಿಜೆಪಿ ಮುಖಂಡ ಪುರುಷೋತ್ತಮ್, ಬಂಡಿಕೇರಿ ರವಿ, ವೀರಭದ್ರ ಸ್ವಾಮಿ , ಮಹೇಶ್, ಶೈಲೇಶ್,ಹರ್ಷಿತ್ ಎಸ್ ನಾಗೇಶ್, ವಿಕ್ರಂ ಅಯ್ಯಂಗಾರ್, ನಿರೀಕ್ಷಿತ್,ಮತ್ತಿತರರು ಹಾಜರಿದ್ದರು.