ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಅವರು
ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೈಸೂರು ಜಿಲ್ಲಾಡಳಿತ ವತಿಯಿಂದ ನಗರದ ವಿಶ್ವವಿದ್ಯಾಲಯ ಒವೆಲ್ ಮೈದಾನದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಮಾಜ ಸೇವಾ ಕ್ಷೇತ್ರದಲ್ಲಿ ರೇಖಾ ಶ್ರೀನಿವಾಸ್ ಅವರಿಗೆ ಮೈಸೂರು ಜಿಲ್ಲಾ ಮಂತ್ರಿ ಡಾ ಎಚ್ ಸಿ ಮಹದೇವಪ್ಪ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಾಸಕ ತನ್ವೀರ್ ಸೇಟ್, ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.