ಹಿರಿಯ ಪುತ್ರನನ್ನು ಪಕ್ಷ-ಕುಟುಂಬದಿಂದ ಹೊರಹಾಕಿದ ಲಾಲೂ

Spread the love

ಪಾಟ್ನಾ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರು, ತಮ್ಮ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಅವರನ್ನು ಹೊರಹಾಕುವ ಮೂಲಕ ಭಾರೀ ಚರ್ಚೆ ಹುಟ್ಟುಹಾಕಿದ್ದಾರೆ.

ಲಾಲೂ ಪ್ರಸಾದ್ ಅವರು ತಮ್ಮ ಮಗನನ್ನು ಪಕ್ಷ ಮತ್ತು ಕುಟುಂಬದಿಂದಲೂ ಹೊರಹಾಕಿದ್ದಾರೆ.

ನೈತಿಕ ಮೌಲ್ಯಗಳ ಕೊರತೆ ಆರೋಪದ ಮೇಲೆ, ತಮ್ಮ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಅವರನ್ನು ಪಕ್ಷ ಮತ್ತು ಕುಟುಂಬದಿಂದ ಹೊರಹಾಕಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಲಾಲೂ ಕಿರಿಯ ಪುತ್ರ ತೇಜಸ್ವಿ ಯಾದವ್‌ ಅವರು, ಪಕ್ಷ ಯಾವುದೇ ಕಾರಣಕ್ಕೂ ಅಶಿಸ್ತನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನಮ್ಮ ತಂದೆ ರವಾನಿಸಿದ್ದಾರೆ ಎಂದು ತಿಳಿಸಿದ್ದಾರೆ.

ಲಾಲೂ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದ್ದಾರೆ.ಅಷ್ಟೇ ಅಲ್ಲಾ ಅವರನ್ನು ಕುಟುಂಬದಿಂದಲೂ ಹೊರಹಾಕಲಾಗಿದೆ.

ಆರ್‌ಜೆಡಿ ಪಕ್ಷ ಬಿಹಾರದ ಜನರಿಗೆ ಸಮರ್ಪಿತವಾಗಿದೆ. ನನ್ನ ಅಣ್ಣನ ರಾಜಕೀಯ ಜೀವನ ಮತ್ತು ವೈಯಕ್ತಿಕ ಜೀವನವು ವಿಭಿನ್ನವಾಗಿದೆ. ಅವರು ತಮ್ಮ ವೈಯಕ್ತಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದ್ದಾರೆ. ಅವರು ವಯಸ್ಕರಾಗಿದ್ದು,
ನಿರ್ಧಾರಗಳನ್ನು ತೆಗೆದುಕೊಳ್ಳಲು ಸ್ವತಂತ್ರರಾಗಿದ್ದಾರೆ ಎಂದು ತೇಜಸ್ವಿ ಯಾದವ್‌ ತಿಳಿಸಿದ್ದಾರೆ.

ನಮ್ಮ ಅಣ್ಣ ತಮ್ಮ ವೈಯಕ್ತಿಕ ಜೀವನದಲ್ಲಿ ಏನು ಮಾಡುತ್ತಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಅವರು ಕುಟುಂಬದಲ್ಲಿ ಯಾರನ್ನೂ ತಮ್ಮವರೆಂದು ಪರಿಗಣಿಸುವುದಿಲ್ಲ. ಹೀಗಾಗಿ ಅವರನ್ನು ಕುಟುಂಬದಿಂದಲೂ ಹೊರಹಾಕುವ ನಿರ್ಧಾರವನ್ನು ನಮ್ಮ ತಂದೆ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತೇಜ್ ಪ್ರತಾಪ್ ಅವರ ಸಾಮಾಜಿಕ ಜಾಲತಾಣದ ಪೋಸ್ಟ್‌ ವಿವಾದಕ್ಕೆ ಕಾರಣವಾಗಿತ್ತು.ಇದರಿಂದ ಆಗಿಯೇ ಲಾಲೂ ತಮ್ಮ ಹಿರಿಯ ಪುತ್ರನನ್ನು ಪಕ್ಷದಿಂದ ಉಚ್ಚಾಟಿಸುವ ನಿರ್ಧಾರ ಮಾಡಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಈ ಸಂದರ್ಭದಲ್ಲಿ ತೇಜ್‌ ಪ್ರತಾಪ್‌‌ ಯಾದವ್ ಅವರ ನಡವಳಿಕೆ ಪಕ್ಷಕ್ಕೆ ಹಾನಿಯಾದರೆ ಕಷ್ಟ ಎಂದು ಲಾಲೂ ಪ್ರಸಾದ್‌ ಯಾದವ್‌ ಈ ಕ್ರಮ ಕೈಗೊಂಡಿದ್ದಾರೆಂದು ಪಕ್ಷದ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.