ರೋಹಿತ್ ವೆಮುಲಾ ಕಾಯ್ದೆ; ಪರಿಶೀಲಿಸಿ ಕ್ರಮ: ಸಿದ್ದರಾಮಯ್ಯ

Spread the love

ಬೆಂಗಳೂರು: ರೋಹಿತ್ ವೆಮುಲಾ ಕಾಯ್ದೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು ‌

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದೆ, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

ಸಿ. ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.