ರೈತ ದಸರಾ ಕುರಿತು ಉಪಸಮಿತಿ ಸಭೆಯಲ್ಲಿ ‌ಚರ್ಚೆ

Spread the love

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮೂಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಸರ್ಕಾರ ವಿವಿಧ ಸಮಿತಿಗಳ ಸಭೆಯನ್ನು ಹಮ್ಮಿಕೊಳ್ಳುತ್ತಿದೆ.

ಮೈಸೂರು ಜಿಲ್ಲಾ ಪಂಚಾಯಿತಿಯ ಡಿ.ದೇವರಾಜು ಅರಸು ಸಭಾಂಗಣದಲ್ಲಿ ರೈತ ದಸರಾ ಉಪಸಮಿತಿ ಸಭೆ ನಡೆಸಲಾಯಿತು.

ಉಪವಿಶೇಷಾಧಿಕಾರಿ ಹಾಗೂ ಜಿಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು ಅವರ ಅಧ್ಯಕ್ಷತೆಯಲ್ಲಿ ರೈತ ದಸರಾ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.

ರೈತ ದಸರಾ ದಲ್ಲಿ ‌ರೈತರಿಗೆ ಉಪಯುಕ್ತ ಮಾಹಿತಿ ನೀಡುವ,ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಹಮ್ಮಿಕೊಳ್ಳಲು ಸೂಚನೆಗಳನ್ನು ನೀಡಲಾಯಿತು.

ಸಭೆಯಲ್ಲಿ ಕೃಷಿ ಇಲಾಖೆ,ತೋಟಗಾರಿಕೆ,
ಪಶುಸಂಗೋಪನಾ, ರೇಷ್ಮೇ ಇಲಾಖೆ ಉಪನಿರ್ದೇಶಕರುಗಳು, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.