ಮೈಸೂರು: ಸ್ವಾಮಿ ವಿವೇಕಾನಂದರು ಸೇರಿದಂತೆ ಮಹನೀ ಯರ ಆದರ್ಶವನ್ನು ಇಂದಿನ ಪೀಳಿಗೆ ಪಾಲಿಸಬೇಕು ಎಂದು ಮೈಸೂರು ನಗರ ಜೆಡಿಎಸ್ ಕಾರ್ಯದಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಕರೆ ನೀಡಿದರು.

ಜೆಪಿ ನಗರದಲ್ಲಿರುವ ಶ್ರೀ ಪೇಜಾವರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು, ಹಂಪಲು ಹಾಗೂ ದಿನಸಿ ಸಾಮಗ್ರಿಗಳನ್ನು ವಿತರಿಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಹಮ್ಮಿಕೊಂಡು
ಅವರು ಮಾತನಾಡಿದರು.
ಮಕ್ಕಳ ಮನಸ್ಸು ವಿಶಾಲವಾದದ್ದು, ನಾವು ಮಕ್ಕಳಲ್ಲಿ ಏನನ್ನು ಬಿತ್ತುತ್ತೆವೆಯೋ ಅದನ್ನೆ ಬೆಳೆಯುತ್ತೇವೆ. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಗೆ ದಾಸರಾಗದೇ, ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕು’ ಎಂದು ಸಲಹೆ ನೀಡಿದರು.
ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರತರುವ ಕೆಲಸ ಶಿಕ್ಷಕರಿಂದ ಆಗಬೇಕು ಎಂದು ಎಸ್ ಪ್ರಕಾಶ್ ಪ್ರಿಯದರ್ಶನ್ ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ಪೇಜಾವರ ವಿದ್ಯಾರ್ಥಿ ನಿಲಯ ಪಾಲಕ ಪುಟ್ಟಣ್ಣ, ಜಾನ್ ಜೋಸೆಫ್,ವೀರಭದ್ರ ಸ್ವಾಮಿ,ರಾಜೇಶ್ ಕುಮಾರ್, ಮಹೇಶ್, ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದರು.