ಮೈಸೂರು: ಮಾಜಿ ಸಚಿವ ಸಾ.ರಾ. ಮಹೇಶ್ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್,ಹಣ್ಣು ಹಂಪಲು ವಿತರಿಸಲಾಯಿತು.
ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣು ಹಂಪಲು ಹಿರಿಯ ಸಮಾಜ ಸೇವಕ ರಘುರಾಮ ವಾಜಪೇಯಿ ಅವರು ವಿತರಿಸಿದರು.
ನಗರದ ಜೆಪಿ ನಗರದಲ್ಲಿರುವ ಶ್ರೀ ಪೇಜಾವರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್, ಹಣ್ಣು ಹಂಪಲು ವಿತರಿಸಿ,ಸಾರಾ ಮಹೇಶ್ ರವರ ಹುಟ್ಟುಹಬ್ಬ ಆಚರಣೆಯನ್ನು ಅರ್ಥಪೂರ್ಣವಾಗಿ ಆರಿಸಲಾಯಿತು.
ಈ ವೇಳೆ ಸ್ನೇಹ ಬಳಗದ ಸದಸ್ಯರು ಮತ್ತು ವಿದ್ಯಾರ್ಥಿಗಳು ಸಾರಾ ಮಹೇಶ್ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಸಮಾಜ ಸೇವಕರಾದ ರಘುರಾಮ್ ವಾಜಪೇಯಿ ಅವರು,ಸಾರಾ ಮಹೇಶ್ ಅವರನ್ನು ವಿದ್ಯಾರ್ಥಿ ದೆಸೆಯಿಂದಲೂ ಬಲ್ಲೆ, ಸದಾ ಜನರಿಗೆ ಒಳಿತು ಮಾಡುವ ಮನಸ್ಸುಳ್ಳ ವ್ಯಕ್ತಿ, ಅವರು ಹಂತ ಹಂತವಾಗಿ ಬೆಳೆದು ಶಾಸಕರಾಗಿ ಸಚಿವರಾಗಿ ಜನರ ಸೇವೆ ಮಾಡುವುದರ ಜೊತೆಯಲ್ಲಿ ಅವರ ವೈಯಕ್ತಿಕವಾಗಿ ಸಂಪಾದನೆ ಮಾಡಿದ ಬಹುಪಾಲು ಹಣವನ್ನು ಕೆ ಆರ್ ನಗರದ ಜನತೆಗೆ ಒಂದಲ್ಲ ಒಂದು ರೀತಿಯಲ್ಲಿ ನೀಡಿದ್ದಾರೆ ಇಂತಹ ಮನಸುಳ್ಳ ಸಾರಾ ಮಹೇಶ್ ಗೆ ತಾಯಿ ಚಾಮುಂಡೇಶ್ವರಿ ಇನ್ನೂ ಹೆಚ್ಚಿನ ರಾಜಕೀಯ ಶಕ್ತಿ ನೀಡಲಿ ಎಂದು ಶುಭ ಹಾರೈಸಿದರು.
ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್ ಅವರು ಮಾತನಾಡಿ, ಮಾಜಿ ಸಚಿವರಾದ ಸಾರಾ ಮಹೇಶ್ ರವರು ಕೆ ಆರ್ ನಗರದ ಸರ್ವತೋಮುಖ ಅಭಿವೃದ್ಧಿಯನ್ನು ಮಾಡಿದ್ದು ಸಚಿವರಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಮಾಡಿದ್ದಾರೆ, ಜನರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಅವರು ಮುಂದಿನ ಚುನಾವಣೆಯಲ್ಲಿ ಗೆದ್ದು ಕೆ ಆರ್ ನಗರದ ಶಾಸಕರಾಗಿ, ಸಚಿವರಾಗಿ ರಾಜ್ಯದ ಜನತೆಯ ಸೇವೆ ಮಾಡಲೆಂದು ಶುಭ ಕೋರಿದರು
ಈ ಸಂದರ್ಭದಲ್ಲಿ ವಿದ್ಯಾರ್ಥಿ ನಿಲಯದ ಪುಟ್ಟಣ್ಣ, ಸುಬ್ರಮಣ್ಯ,ಛಾಯಾ,ಗಾಯಕ ಯಶವಂತ್ ಕುಮಾರ್, ವೀರಭದ್ರ ಸ್ವಾಮಿ , ಮಹೇಶ್, ರಾಜೇಶ್ ಕುಮಾರ್,ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್, ದರ್ಶನ್ ,ಹರ್ಷಿತ್ ಎಸ್ ನಾಗೇಶ್, ನಿರೀಕ್ಷಿತ್ ಮತ್ತಿತರರು ಹಾಜರಿದ್ದರು.