ಮೈಸೂರು: ಮೈಸೂರಿನ ಸರಸ್ವತಿಪುರಂ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ನಾಳೆ
ಖ್ಯಾತ ಹಿನ್ನೆಲೆ ಗಾಯಕಿ ಕು. ಅನನ್ಯ ಪ್ರಕಾಶ್ ಅವರಿಂದ ಸತ್ವಂ ಕಾರ್ಯಕ್ರಮ ನಡೆಯಲಿದೆ.
ಶ್ರೀ ಕೃಷ್ಣ ಟ್ರಸ್ಟ್, ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿ
ವತಿಯಿಂದ ಉಡುಪಿ ಶ್ರೀ ಕಾಣಿಯೂರು ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರ 35ನೇ ಚಾತುರ್ಮಾಸ್ಯ ಅಂಗವಾಗಿ ಅನನ್ಯ ಪ್ರಕಾಶ್ ರಿಂದ ಸತ್ವಂ ಕಾರ್ಯಕ್ರಮವನ್ನು ಶುಕ್ರವಾರ ಸಂಜೆ 7 ಗಂಟೆಗೆ ಆಯೋಜಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ಪ್ರಕಟಣೆಯ ಮೂಲಕ ಶ್ರೀ ಕೃಷ್ಣ ಟ್ರಸ್ಟ್ ಚಾತುರ್ಮಾಸ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ವಿ ಶ್ರೀಧರ್ ತಿಳಿಸಿದ್ದಾರೆ.
