ಶಾಂತವೇರಿ ಗೋಪಾಲಗೌಡರು ನಾಡು ಕಂಡ ಶ್ರೇಷ್ಠ ರಾಜಕಾರಣಿ:ಬಿ.ಸೋಮಶೇಖರ್

Spread the love

ಚಾಮರಾಜನಗರ: ಚಾಮರಾಜನಗರದಲ್ಲಿ ಕರ್ನಾಟಕ ಏಕೀಕರಣದ ರೂವಾರಿ ಸಮಾಜವಾದಿ ನಾಯಕ, ಆದರ್ಶ ರಾಜಕಾರಣಿ ಶ್ರೀ ಶಾಂತವೇರಿ ಗೋಪಾಲಗೌಡ ರವರ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಅಖಿಲ ಕರ್ನಾಟಕ ಕನ್ನಡ ಮಹಾ ಸಭಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವನ್ನು
ಮಾಜಿ ಸಚಿವ ಬಿ. ಸೋಮಶೇಖರ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಶಾಂತವೇರಿ ಗೋಪಾಲಗೌಡರು ನಾಡು ಕಂಡ ಪ್ರಾಮಾಣಿಕ ಶ್ರೇಷ್ಠ ರಾಜಕಾರಣಿ ಎಂದು ಸ್ಮರಿಸಿದರು.

ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿದ್ದರು. ಇಂತಹ ಮಹನೀಯರ ವಿಚಾರಧಾರೆ ಗಳನ್ನು ನೆನೆಯುವುದು ಅನಿವಾರ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯ ಖ್ಯಾತ ನರರೋಗ ತಜ್ಙ ಡಾ. ವಿ ಸುಶ್ರುತ ಗೌಡ ವಹಿಸಿದ್ದರು.

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ, ಮಾಜಿ ಶಾಸಕರಾದ ನಂಜುಂಡಸ್ವಾಮಿ, ನಿರಂಜನ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದಿವ್ಯ ಸಾನಿಧ್ಯ ವನ್ನು ಹರಿವೆ ವಿರಕ್ತ ಮಠದ ಸರ್ಪ ಭೂಷಣ ಸ್ವಾಮೀಜಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾ ಸಭಾದ ರಾಜ್ಯಾಧ್ಯಕ್ಷ ಶ್ರೀನಿವಾಸ ಗೌಡ, ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ರಾಮಚಂದ್ರು, ಚಿನ್ನಮುತ್ತು, ನಂಜುಂಡಪ್ಪ, ಲತಾ ರಂಗನಾಥ್, ವರಕೂಡು ಕೃಷ್ಣೇಗೌಡ, ಪ್ರಭಾಕರ್, ನಂಜುಂಡಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.