ಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಸಿಹಿ ವಿತರಿಸಿ ಆಚರಿಸಲಾಯಿತು.
ಚಾಮರಾಜ ಜೋಡಿ ರಸ್ತೆಯಲ್ಲಿ ವರನಟ ಡಾಕ್ಟರ್ ರಾಜಕುಮಾರ್ ಪ್ರತಿಮೆ ಮುಂಭಾಗ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬ ಅಂಗವಾಗಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ ಅವರು,ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯಸ್ಸು ಮತ್ತು ಆರೋಗ್ಯ ಭಾಗ್ಯ ಸಿಗಲಿ ಎಂದು ಹಾರೈಸಿದರು.
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕಿಶೋರ್ ಕುಮಾರ್, ಎಸ್. ಎನ್ ರಾಜೇಶ್, ಮೋಹನ್, ಮಂಜುನಾಥ್, ರವಿಚಂದ್ರ, ಸುಚಿಂದ್ರ, ಚಕ್ರಪಾಣಿ,ಹರೀಶ್ ನಾಯ್ಡು, ಕಿರಣ್ ಮತ್ತಿತರರು ಹಾಜರಿದ್ದರು.