ವಾಷಿಂಗ್ಟನ್: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿರುವ ವೈಟ್ ಹೌಸ್ ಬಳಿ ಗುಂಡಿನ ಚಕಮಕಿ ನಡೆದಿದೆ.
ಗುಂಡಿನ ದಾಳಿ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದೊಳಗೆ ಇದ್ದರು.
ಈ ಘಟನೆ ಬಳಿಕ ಭದ್ರತಾ ವ್ಯವಸ್ಥೆಯನ್ನು ಹೆಚ್ಚು ಮಾಡಲಾಗಿದೆ. ಭಾನುವಾರ ಮುಂಜಾನೆ ಶ್ವೇತಭವನದ ಎದುರಿನ ಲಫಯೆಟ್ಟೆ ಪಾರ್ಕ್ ಬಳಿ ಗುಂಡಿನ ದಾಳಿ ನಡೆದಿದೆ.ಆದರೆ ಗುಂಡಿನ ದಾಳಿ ವೇಳೆ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಬಂದೂಕು ಹಿಡಿದು ದಾಳಿ ನಡೆಸಿದ ಮುಸುಕುಧಾರಿ ತಲೆಮರೆಸಿಕೊಂಡಿದ್ದು ಹುಡುಕಾಟ ನಡೆಸಲಾಗುತ್ತಿದೆ.
ಗುಂಡಿನ ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಕಳೆದ ಕೆಲವು ವಾರಗಳಿಂದ ನವೀಕರಣಕ್ಕಾಗಿ ಲಫಯೆಟ್ಟೆ ಪಾರ್ಕ್ ಮುಚ್ಚಲಾಗಿದ್ದು, ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ.
