ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ.

ಬೆಂಗಳೂರು ನಗರದ ಐತಿಹಾಸಿಕ ಕರಗ ಮಹೋತ್ಸವದ ಅಂಗವಾಗಿ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ವೇಳೆ ಕರಗ ಹೊರುವ ವೀರಕುಮಾರರಾದ ಶ್ರೀ ಜ್ಞಾನೇಂದ್ರ ಅವರು ಸಿದ್ದರಾಮಯ್ಯ ಅವರನ್ನು ಬರಮಾಡಿಕೊಂಡು ಫಲತಾಂಬೂಲ ನೀಡಿ ಹಾರ ಹಾಕಿ ಒಳ್ಳೆಯದಾಗಲೆಂದು ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಕರಗ ಮಹೋತ್ಸವದ ಪ್ರಯುಕ್ತ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೇನೆ. ನಾಡಿನ ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.