ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯವನ್ನು ಗುರಿಯಾಗಿಸಿಕೊಂಡು ಯಾವುದೇ ದಾಖಲೆಗಳಿಲ್ಲದೆ ಕೆಲವರು ನಿರಂತವಾಗಿ ಸುಳ್ಳು ಸುದ್ಧಿಗಳನ್ನು ಪ್ರಚಾರ ಮಾಡುತ್ತಿದ್ದು,ಶ್ರೀ ಕ್ಷೇತ್ರದ ಕೋಟ್ಯಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಮೈಸೂರು ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಸದಸ್ಯರು ಬುಧವಾರ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಜಾಥಾದಲ್ಲಿ ಅನೇಕ ನಾಯಕರು ಈ ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀ ಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ತಮ್ಮ ಯೂಟ್ಯೂಬ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಮಾಹಿತಿಗಳನ್ನು ಭಿತ್ತರಿಸಿ ಭಕ್ತರಲ್ಲಿ ಗೊಂದಲವನ್ನು ನಿರ್ಮಿಸುತ್ತಿದ್ದಾರೆ.
ಇದರಿಂದಾಗಿ ಈಗಾಗಲೇ ಸಮಾಜದಲ್ಲಿ ಎರಡು ಬಣಗಳು ನಿರ್ಮಾಣವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಉದ್ವಿಗ್ನತೆ ಮತ್ತು ಶಾಂತಿಭಂಗಕ್ಕೆ ಕಾರಣವಾಗಬಹುದಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಅನಾಮಿಕ ವ್ಯಕ್ತಿ ನೀಡಿದ ದೂರಿನ ಆಧಾರದಲ್ಲಿ ರಾಜ್ಯ ಸರಕಾರವು ‘ವಿಶೇಷ ತನಿಖಾ ತಂಡ’ ವನ್ನು ರಚಿಸಿ ತನಿಖೆ ನಡೆಸುತ್ತಿರುವುದನ್ನು ಸ್ವಾಗತಿಸುತ್ತೇವೆ ಎಂದು ಶ್ರೀ ಕ್ಷೇತ್ರದ ಭಕ್ತವೃಂದ ಗೌರವದಿಂದ ಸ್ವಾಗತಿಸುತ್ತದೆ ಎಂದು ಹೇಳಿದರು.
ಆದರೆ ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀ ಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ತಮ್ಮ ಯೂಟ್ಯೂಬ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಮಾಹಿತಿಗಳನ್ನು ಭಿತ್ತರಿಸಿ ಭಕ್ತರಲ್ಲಿ ಗೊಂದಲವನ್ನು ನಿರ್ಮಿಸುತ್ತಿದ್ದಾರೆ.
ಸೌಜನ್ಯಾಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ದಾಳಿಗೆ ಹೊರಟ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ಎಂ.ಡಿ, ಸಂತೋಷ್ ಶೆಟ್ಟಿ, ಜಯಂತ್ ಟಿ, ಅಜಯ್ ಅಂಚನ್ ಇವರುಗಳು ಷಡ್ಯಂತ್ರ ಹಾಗೂ ಅಪಪ್ರಚಾರ ಮಾಡುತ್ತಿರುವುದರ ಹಿನ್ನೆಲೆ ಏನು ಎಂದು ಕಾರವಾಗಿ ಪ್ರಶ್ನಿಸಿದರು.
ಸುಳ್ಳು ಆರೋಪ ಮಾಡಲು ಪ್ರಚೋದಿಸುತ್ತಿರುವವರು ಯಾರು, ಈ ತಂಡಕ್ಕೆ ಹಣಕಾಸಿನ ನೆರವು ಎಲ್ಲಿಂದ ಬರುತ್ತಿದೆ ಎಂಬುದನ್ನು ತಿಳಿಯಲು ಸೂಕ್ತ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ತಮ್ಮ ಮೊಬೈಲ್‌ನಲ್ಲಿ ಸಾಕ್ಷಿಗಳಿವೆ ಎಂದು ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಘಂಟಾಘೋಷವಾಗಿ ಭಾಷಣ ಮಾಡುತ್ತಿರುವ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ಎಂ.ಡಿ, ಸಂತೋಷ್ ಶೆಟ್ಟಿ, ಜಯಂತ್ ಟಿ, ಅಜಯ್ ಅಂಚನ್ ಇವರುಗಳನ್ನು ವಿಚಾರಣೆಗೆ ಒಳಪಡಿಸಿ ಸತ್ಯಾಸತ್ಯತೆಯನ್ನು ಬಯಲಿಗೆ ಎಳೆಯಬೇಕು ಈ ನಿಟ್ಟಿನಲ್ಲಿ ಈಗಿರುವ ಎಸ್‌ಐಟಿ ತಂಡ ಅಥವಾ ಇನ್ನೊಂದು ತನಿಖಾ ತಂಡವನ್ನು ರಚಿಸಿ ತಕ್ಷಣ ತನಿಖೆಯನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿಗಳನ್ನು ಹರಿಬಿಡುತ್ತಿರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಮುಂದಿನ ದಿನಗಳಲ್ಲಿ ಈ ರೀತಿಯ ಸುಳ್ಳು ಸುದ್ದಿಗಳು ಸಮೂಹ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ವೃಂದದವರು ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜ್ ರವರನ್ನು ಭೇಟಿಯಾಗಿ ದೂರು ಸಲ್ಲಿಸಿ ಸರ್ಕಾರಕ್ಕೆ ರವಾನಿಸುವಂತೆ ಒತ್ತಾಯಿಸಿದರು.
ಜಾಥಾದಲ್ಲಿ ಮಾಜಿ ಸಚಿವ ಕೋಟೆ ಶಿವಣ್ಣ, ಮಾಜಿ ಶಾಸಕ ನಾಗೇಂದ್ರ, ಮಾಜಿ ಮೂಡ ಅಧ್ಯಕ್ಷರಾದ ಹೆಚ್.ವಿ ರಾಜೀವ್, ಮಾಜಿ ಮೇಯರ್‌ಗಳಾದ ಬೈರಪ್ಪ, ಸಂದೇಶ್ ಸ್ವಾಮಿ, ಶಿವಕುಮಾರ್,ವೇದಿಕೆಯ ಸಂಚಾಲಕರಾದ ವಿಕಾಸ್ ಶಾಸ್ತ್ರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಹಂದನಹಳ್ಳಿ ಸೋಮಶೇಖರ್, ಬಸವರಜು, ಜಿಲ್ಲಾ ಜನಜಾಗೃತಿ ಅಧ್ಯಕ್ಷ ಪ್ರಭುಸ್ವಾಮಿ, ಹಿರಿಯ ವಕೀಲರಾದ ಶ್ಯಾಮ್‌ಭಟ್, ಹರೀಶ್ ಹೆಗ್ಗಡೆ, ಹಿಂದೂ ಕಾರ್ಯಕರ್ತರಾದ ಪ್ರೇಮ್‌ಕುಮಾರ್, ಧರ್ಮಸ್ಥಳ ಸಾವಿರಾರು ಭಕ್ತಾಭಿಮಾನಿಗಳು ಭಾಗವಹಿಸಿದ್ದರು.
ನಾವು ನೀಡಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸರಕಾರ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.