ಮೈಸೂರು: ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್, ಯುವರತ್ನ ಪುನೀತ್ ರಾಜಕುಮಾರ್ ಅವರ ಜನ್ಮದಿನೋತ್ಸವವನ್ನು ಶ್ರೀರಾಮ ಗೆಳೆಯರ ಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ಮತ್ತು ಸಿಹಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷರಾದ ಸಿ ಸಂದೀಪ್ ಅವರು ಮಾತನಾಡಿ ಪುನೀತ್ ರಾಜಕುಮಾರ್ ಅವರು ಮಾಡಿರುವ ಸೇವಾ ಕಾರ್ಯ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿರಲಿ ಎಂದು ಸ್ಪೂರ್ತಿ ದಿನವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಜನಸಾಮಾನ್ಯರು ಅವರು ಮಾಡಿರುವ ಸೇವಾ ಕಾರ್ಯವನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಸಾರ್ವಕಜನಿಕ ಜೀವನದಲ್ಲಿ ಸೇವಾಮನೋಭಾವದಿಂದ ಆರೋಗ್ಯ ಶಿಬಿರ, ರಕ್ತದಾನ, ನೇತ್ರದಾನ, ಸಾಮೂಹಿಕ ವಿವಾಹ ಸೇರಿದಂತೆ ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ಅನ್ನ ದಾಸೋಹ ಕಾರ್ಯಕ್ರಮಗಳನ್ನ ಆಯೋಜಿಸುತ್ತಾ ಬಂದಿದ್ದಾರೆ. ಪರಿಸರ ಕಾಳಜಿ ಮತ್ತು ಕನ್ನಡ ಭಾಷೆಗಾಗಿ ಅಪ್ಪೂ ಅವರ ಸೇವೆ ಅವಿಸ್ಮರಣೀಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀರಾಮ ಗೆಳಯರ ಬಳಗದ ಅಂಬಳೆ ಶಿವಣ್ಣ, ಉಮಾಶಂಕರ್, ಧರ್ಮೇಂದ್ರ, ಬಸವರಾಜು, ಮಹೇಶ್ ಅರಸ್, ಯೋಗೀಶ್, ರಾಕೇಶ್, ಧನುಷ್, ಕಿರಣ್, ರಾಮು, ಸಿದ್ದಣ್ಣ, ವೆಂಕಟೇಶ್, ರಾಜೇಂದ್ರ, ಪುರುಷೋತ್ತಮ್, ಮಧುಸೂಧನ್, ದೀಪಕ್, ಭಾನುಪ್ರಕಾಶ್, ವಿನಯ್ ಮುಂತಾದವರು ಪಾಲ್ಗೊಂಡಿದ್ದರು.

