ಮೈಸೂರು: ರಾಮಕೃಷ್ಣನಗರದ ಇ ಮತ್ತು ಎಫ್ ಬ್ಲಾಕ್ ನಲ್ಲಿರುವ ಶ್ರೀ ಪ್ರಸನ್ನ ಗಣಪತಿ ಮತ್ತು ಶ್ರೀ ಶಿರಡಿ ಸಾಯಿ ಶಕ್ತಿ ಸನ್ನಿಧಿ ಟ್ರಸ್ಟ್ ವತಿಯಿಂದ ಗುರುಪೂರ್ಣಿಮೆ ನಿಮಿತ್ತ ಸಾಯಿಬಾಬಾ ಮೂರ್ತಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ವೇದಘೋಷಗಳೊಂದಿಗೆ ಜಲಾಭಿಷೇಕ, ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ಶಾಸಕರಾದ ಜಿ ಟಿ ದೇವೇಗೌಡರು ದೇವಸ್ಥಾನಕ್ಕೆ ಭೇಟಿ ನೀಡಿ, ಸಾಯಿಬಾಬ ದರ್ಶನ ಪಡೆದರು.
ಈ ವೇಳೆ ಮಾತನಾಡಿದ ಅವರು ಪ್ರತಿಯೊಬ್ಬರೂ ಜೀವನದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಗುರುವಿನ ಅನುಗ್ರಹಕ್ಕೆ ಒಳಗಾಗಿರುತ್ತಾರೆ ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ಮಾತಿದೆ, ಗುರುಗಳ ಆಶೀರ್ವಾದ ಮಾರ್ಗದರ್ಶನ, ಆಶೀರ್ವಾದ ಇಲ್ಲದಿದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ, ಎಲ್ಲರೂ ಗುರುವಿನ ಪ್ರೀತಿಗೆ ಪಾತ್ರರಾಗಿ, ಅವರ ಆಶೀರ್ವಾದ ಪಡೆದು ಪುನೀತರಾಗಬೇಕು ಎಂದು ಹೇಳಿದರು.
ಬೆಳಗ್ಗೆಯಿಂದ ಸಂಜೆಯವರೆಗೂ ಸಾವಿರಾರು ಭಕ್ತರು ಕುಟುಂಬ ಸಮೇತ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಸಾಯಿಬಾಬಾ ದರ್ಶನ ಪಡೆದರು, ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು,
ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಚಾಮಯ್ಯ, ಗೌರವ ಅಧ್ಯಕ್ಷರಾದ ಡಾಕ್ಟರ್ ಸೀತಾ ಲಕ್ಷ್ಮಿ,ಖಜಾಂಚಿ ಗಂಗಾಧರ್,ಮಹದೇವ್ ಗೌಡ,ಶ್ಯಾಮ್,ಮಿರ್ಲೆ ಫಣೀಶ್ ಮತ್ತಿತರರು ಹಾಜರಿದ್ದರು.