ಶ್ರೀ ಶಿವಾನಂದಪುರಿ ಸ್ವಾಮೀಜಿ ಹುಟ್ಟುಹಬ್ಬ:ಸಮಾಜ ಸೇವಾ ಕಾರ್ಯ

Spread the love

ಮೈಸೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘದ ಜಿಲ್ಲಾ ಸಮಿತಿಯಿಂದ ಸಮಾಜ ಸೇವಾ ಕಾರ್ಯದ ಮೂಲಕ ಶ್ರೀ ಶಿವಾನಂದ ಪುರಿ ಸ್ವಾಮೀಜಿ ಅವರ ಹುಟ್ಟುಹಬ್ಬ ಆಚರಿಸಲಾಯಿತು.

ಶ್ರೀ ಶಿವಾನಂದ ಪುರಿ ಸ್ವಾಮೀಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ಮೊದಲು ಸಿದ್ಧಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್‌ಬುಕ್, ಪೆನ್ನು ಹಾಗೂ ಸಿಹಿ ತಿಂಡಿಯನ್ನು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀ ಅರುಣ್ ಸ್ವಾಮೀಜಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಬಿ. ಸುಬ್ರಹ್ಮಣ್ಯ ಅವರು, ಶ್ರೀ ಶಿವಾನಂದ ಪುರಿ ಸ್ವಾಮೀಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಜೊತೆಗೆ ಸ್ವಾಮೀಜಿಯವರ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಿದರು.

ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಗಳು ಶಿಕ್ಷಣ ಗುಣಮಟ್ಟದಲ್ಲಿ ಯಾವುದಕ್ಕೂ ಕಡಿಮೆ ಇಲ್ಲ, ಸರ್ಕಾರಿ ಶಾಲೆಗಳಲ್ಲಿ ಓದಿದವರೇ ಇಂದು ಉನ್ನತ ಹುದ್ದೆಗಳಲ್ಲಿದ್ದಾರೆ, ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನ ಸೇರಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಉಪ ಮೇಯರ್ ಮಹಾದೇವಮ್ಮ, ಮೈಸೂರು ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಸವರಾಜು, ಪುಟ್ಟಸ್ವಾಮಿ, ಮಹಾದೇವಮ್ಮ, ಜಯ ಎಂ.ಎನ್ ಚೇತನ್ ಗೌಡ, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯೋಪಾದ್ಯಾಯರಾದ ಅಬುಜ, ಹರ್ಷ, ಚೈತ್ರಾ,ಅಂಗನವಾಡಿ ಶಿಕ್ಷಕಿ ಸುಜಾತಾ, ಕಾಂಜೀಗೌಡ ಮತ್ತು ಪುನೀತ್ ರಾಯಣ್ಣ ಉಪಸ್ಥಿತರಿದ್ದರು.