ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಪಾದಯಾತ್ರೆ

Spread the love

ಮೈಸೂರು: ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿ
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಮಾ.17 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ‌

ಅಂದು ಬೆಳಿಗ್ಗೆ 5.30ಕ್ಕೆ‌
ದತ್ತಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಈ ಪಾದಯಾತ್ರೆ ಸಾಗಲಿದೆ.

ಪ್ರತಿಯೊಬ್ಬ ಮನುಷ್ಯನ ಉತ್ತಮ ಆರೋಗ್ಯಕ್ಕೆ ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬ ಕುರಿತು ವಿಶ್ವ ಜನ ಜಾಗೃತಿ ಮೂಡಿಸುವ ಸಲಯವಾಗಿ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ