ಮೈಸೂರು: ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಶೃಂಗೇರಿ ಜಗದ್ಗುರುಗಳ ಸನ್ಯಾಸ ಸ್ವೀಕಾರ ಸ್ವರ್ಣ ಮಹೋತ್ಸವ ಪ್ರಯುಕ್ತ ಮಕ್ಕಳಿಗೆ ಲೇಖನಿ ಸಾಮಗ್ರಿ,ಹಣ್ಣು ವಿತರಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸ್ವರ್ಣ ಮಹೋತ್ಸವ ಅಂಗವಾಗಿ ಮೈಸೂರಿನ ವಿದ್ಯಾರಣ್ಯಪುರ ಅಂದಾನಿ ಸರ್ಕಲ್ ಬಳಿಯ ಸಾರ್ವಜನಿಕ ಸುಬ್ಬಣ್ಣ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳು ಹಾಗೂ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮವನ್ನು ನಾಳೆ (ಅ 27) ಸಂಜೆ 6 ಗಂಟೆಗೆ ಆಯೋಜಿಸಲಾಗಿದೆ
ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ
ಶಾಸಕ ಟಿ. ಎಸ್ ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ. ಟಿ ಪ್ರಕಾಶ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ನo. ಶ್ರೀಕಂಠ ಕುಮಾರ್,
ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಮೈಸೂರು ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್,ಯುವ ಮುಖಂಡರಾದ ಎನ್.ಎಂ ನವೀನ್ ಕುಮಾರ್,ನಗರಪಾಲಿಕೆ ಮಾಜಿ ಸದಸ್ಯರಾದ ಮ. ವಿ ರಾಮಪ್ರಸಾದ್, ಎಂ. ಡಿ ಪಾರ್ಥಸಾರಥಿ, ಕಡಕೋಳ ಜಗದೀಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.