ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್: ಪೊಲೀಸ್ ಇಲಾಖೆ ನಿರ್ಧರಿಸಲಿದೆ: ಸಿದ್ದರಾಮಯ್ಯ

Spread the love

ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತು ಪೊಲೀಸ್ ಇಲಾಖೆ ತೀರ್ಮಾನಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಳ್ಳಲಾಗಿದೆ, ವರದಿ ಆಧಾರದ ಮೇಲೆ ತಪ್ಪು ಮಾಡಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.