ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರ 17ನೇ ದಾಖಲೆಯ ಬಜೆಟ್ ಸ್ವಾಗತಿಸಿ ಮೈಸೂರಿನ ನಂಜುಮಳಿಗೆ ವೃತ್ತದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗ ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು.
ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಅವರ ನೇತೃತ್ವದಲ್ಲಿ
ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಮೈಸೂರು ಪಾಕ್ ವಿತರಿಸಿ ದಾಖಲೆಯ ಸಿದ್ದರಾಮಯ್ಯ ಅವರಿಗೆ ಘೋಷಣೆ ಕೂಗಿ, ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಕೆಆರ್ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ್ ಬಸಪ್ಪ, ಜಿ ರಾಘವೇಂದ್ರ, ಡೈರಿ ವೆಂಕಟೇಶ್, ನವೀನ್ ಕೆಂಪಿ, ಶ್ರೀ ಕನಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರವಿಚಂದ್ರ,ತೀರ್ಥ ಕುಮಾರ್, ವೆಂಕಟೇಶ್, ಜಟ್ಟಿ ಹುಂಡಿ ಸುನಿಲ್, ಧ್ರುವ ಮತ್ತಿತರರು ಹಾಜರಿದ್ದರು.
