16 ಕೆಜಿ ಬೆಳ್ಳಿ ಕಳವು ಪ್ರಕರಣ: 7 ಆರೋಪಿಗಳು ಅರೆಸ್ಟ್

Spread the love

ಮೈಸೂರು: ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 16 ಕೆಜಿ ಬೆಳ್ಳಿ ಕಳವು ಪ್ರಕರಣದಲ್ಲಿ 7 ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮಾಹಿತಿ ನೀಡಿದರು.

ಹೆಬ್ಬಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿಯನ್ನು ಕಟ್ಟಿಹಾಕಿ ದರೋಡೆಕೋರರು 16 ಕೆಜಿ ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿದ್ದರು.

ಮಾಲೀಕರ ಬಳಿ ವಾಹನ ಚಾಲಕನಾಗಿದ್ದ ಗುಜರಾತ್ ಮೂಲದ ವ್ಯಕ್ತಿಯ ನೆರವಿನೊಂದಿಗೆ ದರೋಡೆಕೋರರು ಬೆಳ್ಳಿಯ ಪದಾರ್ಥ ದೋಚಿದ್ದರು.

ಸಾಲದ ಸುಳಿಗೆ ಸಿಲುಕಿದ್ದ ಡ್ರೈವರ್ ಗುಜರಾತ್ ನ ನಟೋರಿಯಸ್ ಕ್ರಿಮಿನಲ್ ನನ್ನು ಸಂಪರ್ಕಿಸಿರುವ ಸಂಗತಿ ತನಿಖೆಯ ವೇಳೆ ಗೊತ್ತಾಗಿದೆ.

ಪ್ರಮುಖ ಆರೋಪಿಯನ್ನು ಸೆರೆ ಹಿಡಿದ ಬಳಿಕ ಡ್ರೈವರ್ ಕೈಜೋಡಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ವೈಜ್ಞಾನಿಕ ಮಾದರಿಯಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ನಟೋರಿಯಸ್ ಕ್ರಿಮಿನಲ್ ಗುಜರಾತ್ ರಾಜ್ಯದ ಬನಸ್ಕಾಂತ ಜಿಲ್ಲೆಯ ದಿಶಾ ಗ್ರಾಮದಲ್ಲಿ ಅಡಗಿದ್ದುದನ್ನು ಪತ್ತೆ ಹಚ್ಚಿದ ಮೈಸೂರು, ಪ್ರಕರಣದಲ್ಲಿ ಭಾಗಿಯಾಗಿದ್ದ ಒಟ್ಟು 7 ಆರೋಪಿಗಳನ್ನು ಬಂಧಿಸಿದ್ದಾರೆ.

ಪರಾರಿಯಾಗಿರುವ ಮತ್ತೊಬ್ಬ ಆರೋಪಿಯನ್ನು ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ ಎಂದು ಸೀಮಾ ಲಾಟ್ಕರ್ ತಿಳಿಸಿದರು.