ಮೈಸೂರು: ಎಸ್ಐಆರ್ ನಡೆಯಲು ಕೇವಲ ಒಂದು ತಿಂಗಳು ಗಡುವು ನೀಡಲಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳ ಮೇಲೆ ಹೆಚ್ಚಿನ ಒತ್ತಡವಾಗಲಿದೆ. ಆದ್ದರಿಂದ ಇನ್ನೊಂದು ತಿಂಗಳ ಅವಧಿಗೆ ಈ ಪ್ರಕ್ರಿಯೆ ವಿಸ್ತರಿಸಬೇಕು ಎಂದು ಚಾಮರಾಜ ಕ್ಷೇತ್ರದ ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷರಾದ ರವಿ ಮಂಚೇಗೌಡನ ಕೊಪ್ಪಲು ಆಗ್ರಹಿಸಿದ್ದಾರೆ
ಮಾಧ್ಯಮ ಹೇಳಿಕೆ ನೀಡಿರುವ ಅವರು ರಾಜ್ಯದಲ್ಲಿ 50.50 ಮತಗಟ್ಟೆಗಳಿದ್ದು, 5.54 ಕೋಟಿ ಮತದಾರರನ್ನು ಗುರುತಿಸಲಾಗಿದೆ. ರಾಜ್ಯದಲ್ಲಿ ಅಕ್ಷರಸ್ಥರ ಪ್ರಮಾಣ ಶೇ.75ರಷ್ಟಿದ್ದು, ಅನಕ್ಷರಸ್ಥರಿಗೆ ಫಾರ್ಮ್ ಭರ್ತಿ ಮಾಡಲು ಸಹಾಯ ಮಾಡುವುದು ಅಪರಾಧವಲ್ಲ ಎಂದು ಹೇಳಿದ್ದಾರೆ.
ಮತದಾರರ ಹಕ್ಕು ರಕ್ಷಿಸುವುದು ಪ್ರಜಾಪ್ರಭುತ್ವದ ಜವಾಬ್ದಾರಿಯಾಗಿದೆ. ಆದ್ದರಿಂದ ಒಂದೆಡೆ ಕುಳಿತು ಅಂತವರ ಫಾರ್ಮ್ ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಹಾಗೂ ಆರ್ಎಸ್ಎಸ್ ಮತದಾರರ ಪರಿಷ್ಕರಣೆ ಹೆಸರಿನಲ್ಲಿ ಕೆಲವು ಸಮುದಾಯಗಳ ಮತದಾನ ಹಕ್ಕನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿವೆ. ಪಶ್ಚಿಮ ಬಂಗಾಳ, ಬಿಹಾರ, ಮಹಾರಾಷ್ಟ್ರ, ಹರಿಯಾಣ, ರಾಜಸ್ಥಾನ, ಅಸ್ಸಾಂ ಹಾಗೂ ದೆಹಲಿಯಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಅದೇ ರೀತಿ ಕರ್ನಾಟಕದಲ್ಲಿ ಷಡ್ಯಂತ್ರ ನಡೆದಿದೆ ಎಂದು ರವಿ ಮಂಚೇಗೌಡನಕೊಪ್ಪಲು ಆರೋಪಿಸಿದ್ದಾರೆ.
