ಮೈಸೂರು: ಹಿರಿಯ ಕನ್ನಡ ಹೋರಾಟಗಾರರಿಗೆ ಸರ್ಕಾರದ ವತಿಯಿಂದ ನಿವೇಶನ ನೀಡಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಾಡು ನುಡಿ ನೆಲ ಜಲ ಭಾಷೆ ವಿಚಾರದಲ್ಲಿ ಸೇವೆ ಸಲ್ಲಿಸಿ ಎಲೆ ಮರೆ ಕಾಯಿಯಂತೆ ಇಂದಿಗೂ ಸಹ ಬಾಡಿಗೆ ಮನೆಯಲ್ಲಿ ವಾಸವಿರುವ ಮೈಸೂರಿನ ಹಿರಿಯ ಕನ್ನಡಪರ ಹೋರಾಟಗಾರರನ್ನು ಗುರುತಿಸಿ ರಾಜ್ಯ ಸರ್ಕಾರ ಕೂಡಲೇ ನಿವೇಶನಗಳನ್ನು ನೀಡಬೇಕು ಎಂದು ಅವರು ಕೋರಿದ್ದಾರೆ
ಗಣನೀಯವಾಗಿ ಸೇವೆ ಸಲ್ಲಿಸಿ ಇಡೀ ಜೀವನವನ್ನೇ ಕನ್ನಡಕ್ಕಾಗಿ ತ್ಯಾಗ ಮಾಡಿದ ಅನೇಕ ಹೋರಾಟಗಾರರು ನಮ್ಮ ಮೈಸೂರಿನಲ್ಲಿ ವಾಸಿಸುತ್ತಿದ್ದಾರೆ,೭೦ ನೇ ಕನ್ನಡ ರಾಜ್ಯೋತ್ಸವದ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅವರುಗಳನ್ನು ಗುರುತಿಸಬೇಕೆಂದು ಒತ್ತಾಯಿಸಿದ್ದಾರೆ.
ಅಂತಹವರನ್ನು ಗುರುತಿಸಿ ಮೈಸೂರಿನ ಪ್ರಮುಖ ಭಾಗಗಳಲ್ಲಿ ನೀವೇಶನ ನಿಡಿದರೆ ಸರ್ಕಾರಕ್ಕೆ ಹೆಚ್ಚು ಕೀರ್ತಿ ಸಲ್ಲುತ್ತದೆ ಮತ್ತು ಕನ್ನಡ ಹೋರಾಟಗಾರರಿಗೆ ಗೌರವ ಕೊಟ್ಟಂತೆ ಆಗುತ್ತದೆ ಎಂದು ತೇಜಸ್ವಿ ಹೇಳಿದ್ದಾರೆ.
೭೦ ನೇ ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹಿರಿಯ ಕನ್ನಡಪರ ಹೋರಾಟಗಾರರನ್ನು ಗುರುತಿಸಿ ನೀವೇಶನಗಳನ್ನು ನೀಡ ಬೇಕೆಂದು ರಾಜ್ಯ ಸರ್ಕಾರಕ್ಕೆ ಕನ್ನಡ ಕ್ರಾಂತಿದಳ ಸಂಘಟನೆಯ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

