ಮೈಸೂರು: ಮೈಸೂರಿನ ವಿಜಯನಗರದಲ್ಲಿರುವ ಸ್ಮಾಲ್ ವಂಡರ್ಸ್ ಫ್ರೀ ಶಾಲೆಯಲ್ಲಿ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಲಾಯಿತು.
ಶಾಲೆಯ ಮಕ್ಕಳು ತಮ್ಮ ಸಹಪಾಠಿಗಳಿಗೆ ರಾಖಿ ಕಟ್ಟಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಿಹಿ ಹಂಚುವ ಮೂಲಕ ರಕ್ಷಾ ಬಂಧನದ ಸಂಭ್ರಮವನ್ನು ಹೆಚ್ಚಿಸಿದರು.
ಹಬ್ಬದ ಮೂಲಕ ಮಕ್ಕಳಲ್ಲಿ ಪ್ರೀತಿ, ಬಾಂಧವ್ಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಬೆಳೆಸುವ ಸಂದೇಶವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನ ಹಬ್ಬದ ಮಹತ್ವ, ಅದರ ಸಾಂಸ್ಕೃತಿಕ ಹಿನ್ನೆಲೆ ಹಾಗೂ ಪರಸ್ಪರ ಗೌರವ ಮತ್ತು ರಕ್ಷಣೆಯ ಸಂದೇಶದ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ರೇವತಿ ಕೃಷ್ಣಪ್ಪ, ಶಿಕ್ಷಕಿಯರಾದ ಅನಿತಾ, ಜಯಶ್ರೀ , ಮಹಾಲಕ್ಷ್ಮಿ, ಕೋಕಿಲ ಹಾಗೂ ಇತರೆ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
