ಮೈಸೂರು: ಸಮಾಜ ಸೇವಕರು ಹಾಗೂ ಜನರಿಗಾಗಿ ಸೇವಾ ಸಮಿತಿ ಅಧ್ಯಕ್ಷರಾದ ಮಹೇಶ್ ಕುಮಾರ್ ಅವರಿಗೆ ಮುಖಂಡರು ಅಭಿನಂದನೆ ಸಲ್ಲಿಸಿದರು.
2026 ರ ಬಸವ ಜಯಂತಿಯ ಅಲಂಕಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶನಿವಾರ ಮಹೇಶ್ ಕುಮಾರ್
ಅವರನ್ನು ಬಸವ ಪುತ್ಥಳಿ ಬಳಿ ಅಖಿಲ ಭಾರತ ವೀರಶೈವ ಮಹಾಸಭೆಯ ಮೈಸೂರು ಜಿಲ್ಲಾಧ್ಯಕ್ಷರಾದ ಹಿನಕಲ್ ಬಸವರಾಜು ಅವರು ಶಾಲು ಹೊದಿಸಿ ಹೂವಿನ ಹಾರ ಹಾಕಿ ಸನ್ಮಾನಿಸಿ,ಶುಭ ಕೋರಿದರು.
ಈ ಸಂದರ್ಭದಲ್ಲಿ ಕನ್ನಡ ಕ್ರಾಂತಿದಳದ ಅಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಮತ್ತಿತರರು ಹಾಜರಿದ್ದರು.
