ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾ ಮನ್ ಮೇಲೆ ಹಲ್ಲೆ: ತೇಜಸ್ವಿ ಖಂಡನೆ

Spread the love

ಮೈಸೂರು: ಸರ್ಕಾರಿ ಜಾಗ ಒತ್ತುವರಿ ಮಾಡಿದವನ ವಿರುದ್ಧ ಸುದ್ದಿ ಬಿತ್ತರಿಸಲು ಹೋದ ಹಿರಿಯ ಕ್ಯಾಮರಾ ಮನ್ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

ನಿನ್ನೆ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಒತ್ತುವರಿಯಾದ ಸರ್ಕಾರಿ ಭೂಮಿ ವಶಪಡಿಸಿಕೊಂಡರು.

ಹೀಗೆ ಭೂಮಿ ವಶಪಡಿಸುವುದನ್ನು ಸುದ್ದಿ ಮಾಡಲು ತೆರಳಿದ್ದ ಕ್ಯಾಮರಾ ಮನ್ ಮೇಲೆ ಕೆಲವರು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ.

ಮೈಸೂರಿನಲ್ಲಿ ಕೆಲವು ದಿನಗಳಿಂದ ಮಾಧ್ಯಮದವರ ಮೇಲೆ ಮೇಲಿಂದ ಮೇಲೆ ಹಲ್ಲೆ ನಡೆಸುವ ಬೆದರಿಕೆ ಹಾಕುವ ಪ್ರಕರಣಗಳು ನಡೆಯುತ್ತಿವೆ
ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ.

ಪೋಲಿಸ್ ಇಲಾಖೆ ಕೂಡಲೇ ವರದಿಗಾರನ ಮೇಲೆ‌ ಹಲ್ಲೆ ನಡೆಸಿದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.