ಜಾತಿ ನಿಂದನೆ ಕೇಸ್ ಗೆ ಹೆದರಿ ಯುವಕ ಆತ್ಮಹತ್ಯೆ:ಶಾಕ್ ನಿಂದ ತಂದೆ ಸಾವು

ಯಾದಗಿರಿ: ಜಾತಿ ನಿಂದನೆ ಕೇಸ್ ಗೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡರೆ ಇತ್ತ ಈ ಸುದ್ದಿ ತಿಳಿದು ಆಘಾತಕ್ಕೊಳಗಾಗಿ ಯುವಕನ ತಂದೆ ಕೂಡಾ ಮೃತಪಟ್ಟ‌ ಹೃದಯ ವಿದ್ರಾವಕ ಘಟನೆ ಯಾದಗಿರಿ ಜಿಲ್ಲೆ ವಡಗೇರ ಪಟ್ಟಣದಲ್ಲಿ ನಡೆದಿದೆ.

ಮಹೆಬೂಬ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.ಸೈಯದ್ ಅಲಿ (50) ಹೃದಯಾಘಾತದಿಂದ ಮೃತಪಟ್ಟ ತಂದೆ

ಜಮೀನಿನಲ್ಲಿ ದಾರಿ ವಿಚಾರಕ್ಕೆ ಕಳೆದ ಒಂದು ವಾರದ ಹಿಂದೆ ವಡಗೇರ ಪಟ್ಟಣದ ದಲಿತ ಕುಟುಂಬದ ಜೊತೆ ಜಗಳವಾಗಿತ್ತು.ಬಳಿಕ ಹಿರಿಯರು ಕುಳಿತು ನ್ಯಾಯ ಪಂಚಾಯತಿ ಮಾಡಿ‌ ಬಗೆಹರಿಸಿದ್ದರು.

ಆದರೆ ಬೇರೆ ಊರಿಂದ‌ ಬಂದ ದಲಿತ ಮುಖಂಡನೊಬ್ಬ ಜಾತಿ‌ ನಿಂದನೆ ಕೇಸ್ ದಾಖಲು ಮಾಡಲು ಮುಂದಾಗಿದ್ದ.

ಜಾತಿ ನಿಂದನೆ ಕೇಸ್ ದಾಖಲು ಮಾಡಿ ಜೈಲಿಗೆ ಕಳುಹಿಸುತ್ತೇನೆ ಎಂದು ಯುವಕ ಮಹಿಬೂಬ್ ಗೆ ಆತ ಬೆದರಿಕೆ ಹಾಕಿದ್ದನೆಂದು ಗೊತ್ತಾಗಿದೆ.

ಜಾತಿ ನಿಂದನೆ ಕೇಸು ದಾಖಲಾದರೆ ಮರ್ಯಾದೆ ಹೋಗುತ್ತದೆ, ಜೈಲಿಗೆ ಹೋಗಬೇಕಾಗುತ್ತದೆ ಎಂದು ಹೆದರಿ ಮಹೆಬೂಬ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಗನ ಆತ್ಮಹತ್ಯೆ ಸುದ್ದಿ ತಿಳಿದು ಆಘಾತಕ್ಕಡ ಒಳಗಾದ ತಂದೆಗೆ ಹೃದಯಾಘಾತವಾಗಿದೆ. ಕೂಡಲೇ ಕಲಬುರಗಿಯ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ತಂದೆ ಸೈಯದ್ ಅಲಿ ಕೂಡ ಮೃತಪಟ್ಟಿದ್ದಾರೆ.

ವಡಗೇರ ಪೊಲೀಸ್ ಠಾಣಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡರು.